ಫ್ಲೋರಿಡಾದಲ್ಲಿ ಗುಂಡಿನ ದಾಳಿ: 3 ಸಾವು, 11 ಮಂದಿಗೆ ಗಾಯ
ಅಮೆರಿಕಾದ ಫ್ಲೋರಿಡಾದ ಜೊಕ್ಲೋನ್ ವಿಲ್ಲೆ ಎಂಬಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ ಮೂವರು ಸಾವನ್ನಪ್ಪಿ, 11ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ನಡೆದಿದೆ...

Published On :
ಫ್ಲೋರಿಡಾ: ಅಮೆರಿಕಾದ ಫ್ಲೋರಿಡಾದ ಜೊಕ್ಲೋನ್ ವಿಲ್ಲೆ ಎಂಬಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ ಮೂವರು ಸಾವನ್ನಪ್ಪಿ, 11ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ನಡೆದಿದೆ.
ಸ್ಥಳೀಯ ಕಾಲಮಾನದ ಪ್ರಕಾರ ಭಾನುವಾರ ಘಟನೆ ಸಂಭವಿಸಿದ್ದು, ನಿನ್ನೆ ಮಧ್ಯಾಹ್ನ ಸಮಯದಲ್ಲಿ ವಿಡಿಯೋ ಗೇಮ್ ಟೂರ್ನಮೆಂಟ್ ನಲ್ಲಿ ಈ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಕೂಡ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ವರದಿಗಳು ತಿಳಿಸಿವೆ.
ಗುಂಡಿನ ದಾಳಿ ನಡೆದ ಕೆಲವೇ ಕ್ಷಣಗಳಲ್ಲಿ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ಗುಂಡಿನ ದಾಳಿ ನಡೆಸಿದ ವ್ಯಕ್ತಿ ಸ್ಪರ್ಧಾಳು ಎಂದು ಹೇಳಲಾಗುತ್ತಿದ್ದು, ದಾಳಿಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ.
ದಾಳಿ ನಡೆಸಿದ ವ್ಯಕ್ತಿಯನ್ನು ಶೆರಿಫ್ ಮೈಕ್ ವಿಲಿಯಮ್ ಎಂಬು ಗುರ್ತಿಸಲಾಗಿದೆ. ವಿಯಮ್ಸ್ ಸ್ಪರ್ಧಾಳುವಾಗಿದ್ದು, ಒಂದು ಗನ್ನಿನ ಮೂಲಕ ದಾಳಿ ನಡೆಸಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಗುಂಡಿನ ದಾಳಿshootಫ್ಲೋರಿಡಾ ಶೂಟೌಟ್Florida mass shootingVideo game tournamentJacksonville mallವಿಡಿಯೋ ಗೇಮ್ ಟೂರ್ನಮೆಂಟ್ಜೊಕ್ಲೋನ್ ವಿಲ್ಲೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


