ವಿದೇಶ

ಭ್ರಷ್ಟಾಚಾರ ನಿಗ್ರಹಕ್ಕೆ ಕೈ ಹಾಕಿದ ಇಮ್ರಾನ್ ಖಾನ್, ಅಕ್ರಮ ಹಣ ಕಸಿಯಲು 2 ವಾರಗಳ ಗಡುವು

ಚುನಾವಣಾ ಪೂರ್ವದಲ್ಲಿ ತಾವು ನೀಡಿದ್ದ ಮಾತಿನಂತೆ ಭ್ರಷ್ಟಾಚಾರ ನಿಗ್ರಹಕ್ಕೆ ಕೈ ಹಾಕಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು, ಭ್ರಷ್ಟಾಚಾರ ನಿಗ್ರಹ ದಳ ರಚನೆ ಮಾಡಿ ಈ ದಳಕ್ಕೆ 2 ವಾರಗಳ ಗಡವು ನೀಡಿದ್ದಾರೆ.

ಭ್ರಷ್ಟಾಚಾರ ನಿಗ್ರಹಕ್ಕೆ ಕೈ ಹಾಕಿದ ಇಮ್ರಾನ್ ಖಾನ್, ಅಕ್ರಮ ಹಣ ಕಸಿಯಲು 2 ವಾರಗಳ ಗಡುವು
ಸಂಗ್ರಹ ಚಿತ್ರ
Published On :
ಇಸ್ಲಾಮಾಬಾದ್: ಚುನಾವಣಾ ಪೂರ್ವದಲ್ಲಿ ತಾವು ನೀಡಿದ್ದ ಮಾತಿನಂತೆ ಭ್ರಷ್ಟಾಚಾರ ನಿಗ್ರಹಕ್ಕೆ ಕೈ ಹಾಕಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು, ಭ್ರಷ್ಟಾಚಾರ ನಿಗ್ರಹ ದಳ ರಚನೆ ಮಾಡಿ ಈ ದಳಕ್ಕೆ 2 ವಾರಗಳ ಗಡವು ನೀಡಿದ್ದಾರೆ.
ಹೌದು.. ಈಗಾಗಲೇ ಇಮ್ರಾನ್ ಖಾನ್ ಅವರ ರಚನೆ ಮಾಡಿರುವ ಭ್ರಷ್ಟಾಚಾರ ನಿಗ್ರಹ ದಳಗಳಿಗೆ 2 ವಾರಗಳ ಗಡುವು ನೀಡಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಮತ್ತು ಈಗಾಗಲೇ ಜನರಿಂದ ಲೂಟಿ ಮಾಡಿರುವ ಹಣವನ್ನು ವಾಪಸ್ ಪಡೆಯಲು ಶಾಶ್ವತ ಕಾರ್ಯ ಸೂಚಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 
ಸೋಮವಾರವಷ್ಟೇ ಇಮ್ರಾನ್ ಖಾನ್ ಅವರು ರಚನೆ ಮಾಡಿದ್ದ ವಿಶೇಷ ಕಾರ್ಯಾಚರಣೆ ಪಡೆ (ಎಸ್ ಟಿಎಫ್) ತನ್ನ ಮೊದಲ ಸಭೆ ನಡೆಸಿತ್ತು. ಸಭೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರ ಮತ್ತು ಭ್ರಷ್ಟ ಅಧಿಕಾರಿಗಳ ಕುರಿತು ಮಾಹಿತಿ ಕಲೆ ಹಾಕಲಾಗಿತ್ತು ಎನ್ನಲಾಗಿದೆ. ಹವಾಲ ದಂಧೆ, ಆರ್ಥಿಕ ವಂಚನೆ ಸೇರಿದಂತೆ ವಿವಿಧ ಪ್ರಮುಖ ಪ್ರಕರಣಗಳ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇದಲ್ಲದೆ ಪ್ರಧಾನಿ ಇಮ್ರಾನ್ ಖಾನ್ ಅವರ ನಿರ್ದೇಶನದಂತೆ ಸ್ವಿಸ್ ಬ್ಯಾಂಕ್ ಸೇರಿದಂತೆ ವಿದೇಶಗಳಲ್ಲಿ ಕಳ್ಳಗಂಟಿಟ್ಟಿರುವವರ ಮೇಲೂ ಕಠಿಣ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.