ವಿದೇಶ

ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕೆ ಮಾಜಿ ಪ್ರಧಾನಿ ವಾಜಪೇಯಿ ನಿಕಟವಾಗಿದ್ದರು- ಇಮ್ರಾನ್ ಖಾನ್

ಬಿಜೆಪಿ 2004ರ ಲೋಕಸಭಾ ಚುನಾವಣೆಯಲ್ಲಿ ಸೋಲದಿದ್ದರೆ ಕಾಶ್ಮೀರ ಸಮಸ್ಯೆಯನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇತ್ಯರ್ಥಪಡಿಸುತ್ತಿದ್ದರು ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಸ್ಮರಿಸಿಕೊಂಡಿದ್ದಾರೆ.

ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕೆ ಮಾಜಿ ಪ್ರಧಾನಿ ವಾಜಪೇಯಿ ನಿಕಟವಾಗಿದ್ದರು- ಇಮ್ರಾನ್ ಖಾನ್
ಇಮ್ರಾನ್ ಖಾನ್
Published On :

ಇಸ್ಲಾಮಾಬಾದ್:  ಬಿಜೆಪಿ 2004ರ ಲೋಕಸಭಾ ಚುನಾವಣೆಯಲ್ಲಿ ಸೋಲದಿದ್ದರೆ  ಕಾಶ್ಮೀರ ಸಮಸ್ಯೆಯನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇತ್ಯರ್ಥಪಡಿಸುತ್ತಿದ್ದರು ಎಂದು ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್  ಸ್ಮರಿಸಿಕೊಂಡಿದ್ದಾರೆ.

ಇಮ್ರಾನ್ ಖಾನ್  ಜೊತೆ ನಡೆಸಿದ ಸಭೆಯಲ್ಲಿ  ಕಾಶ್ಮೀರ ಸಭೆಯನ್ನು ಬಗೆಹರಿಸುವುದಾಗಿ ವಾಜಪೇಯಿ ಹೇಳಿದ್ದಾರಂತೆ. ಆ ಸಭೆಯಲ್ಲಿ ಮಾಜಿ ವಿದೇಶಾಂಗ ಸಚಿವ ನಟವರ್  ಸಿಂಗ್ ಕೂಡಾ ಪಾಲ್ಗೊಂಡಿದ್ದರು ಎಂದು ಇಮ್ರಾನ್ ಖಾನ್  ತಿಳಿಸಿದ್ದಾರೆ.

ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಯುದ್ಧ ಒಂದೇ ಪರಿಹಾರವಲ್ಲಾ, ಉಭಯ ದೇಶಗಳು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ . ಮಾತುಕತೆ ಹೊರತುಪಡಿಸಿ  ಬೇರೆ ಪರ್ಯಾಯ ಮಾರ್ಗಗಳ ಮೂಲಕ ಚರ್ಚೆ ಸಾಧ್ಯವಿಲ್ಲ ಎಂದು ಅವರು  ವಿದ್ಯುನ್ಮಾನ ಪತ್ರಕರ್ತರಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ  ಎರಡು ಅಥವಾ  ಮೂರು ಪರ್ಯಾಯ ಮಾರ್ಗಗಳಿಗೆ, ಆ  ಮೂಲಕ ಚರ್ಚಿಸುವುದಾಗಿ ಇಮ್ರಾನ್ ಖಾನ್ ಹೇಳಿದರಾದರೂ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದರು. ಈ ಬಗ್ಗೆ ಸದ್ಯದಲ್ಲಿ ಮಾತನಾಡುವುದಾಗಿ ತಿಳಿಸಿದರು.

ಎರಡು ಪರಮಾಣು ರಾಷ್ಟ್ರಗಳು ಯುದ್ಧ ಮಾಡಲು ಸಾಧ್ಯವಿಲ್ಲ. ನೆರೆಯ ಎಲ್ಲಾ ರಾಷ್ಟ್ರಗಳೊಂದಿಗೆ ಶಾಂತಿಯುತ ಒಪ್ಪಂದಕ್ಕೆ ಗಂಭೀರವಾಗಿ ಯೋಚಿಸಲಾಗುತ್ತಿದೆ. ಆದರೆ, ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಮಾತುಕತೆಗೆ ಸಿದ್ಧವಾಗಿಲ್ಲ ಎಂದು ಇಮ್ರಾನ್ ಖಾನ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.