ವಿದೇಶ

ಇಟಲಿ ನೈಟ್'ಕ್ಲಬ್'ನಲ್ಲಿ ಕಾಲ್ತುಳಿತ: 6 ಸಾವು, 35 ಮಂದಿಗೆ ಗಾಯ

ಇಟಲಿಯ ಕರಾವಳಿ ಭಾಗ ಅಂಕೋನಾದಲ್ಲಿರುವ ನೈಟ್'ಕ್ಲಬ್'ವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿ, 35ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ...

ಇಟಲಿ ನೈಟ್'ಕ್ಲಬ್'ನಲ್ಲಿ ಕಾಲ್ತುಳಿತ: 6 ಸಾವು, 35 ಮಂದಿಗೆ ಗಾಯ
ಇಟಲಿ ನೈಟ್'ಕ್ಲಬ್'ನಲ್ಲಿ ಕಾಲ್ತುಳಿತ: 6 ಸಾವು, 35 ಮಂದಿಗೆ ಗಾಯ
Published On :
ಅಂಕೋನಾ: ಇಟಲಿಯ ಕರಾವಳಿ ಭಾಗ ಅಂಕೋನಾದಲ್ಲಿರುವ ನೈಟ್'ಕ್ಲಬ್'ವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿ, 35ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ. 
ಕೊರಿನಾಲ್ಡೊದ  ಬ್ಲೂ ಲಾಂಟರ್ನ್ ಕ್ಲಬ್'ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಸಾವಿರಾರು ಜನರು ಭಾಗಿಯಾಗಿದ್ದರು. ಕ್ಲಬ್ ನಲ್ಲಿ ಇದ್ದಕ್ಕಿದ್ದಂತೆಯೇ ದುರ್ವಾಸನೆ ಹರಡಿತ್ತು. ಇದರಿಂದಾಗಿ ಸ್ಥಳದಲ್ಲಿ ಗೊಂದಲ ಸೃಷ್ಟಿಯಾಗಿ ಕಾಲ್ತುಳಿತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. 
ಕ್ಲಬ್ ವೊಳಗೆ ಕೆಟ್ಟ ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಒಳಗೆ ಇರಲು ಸಾಧ್ಯವಾಗದೆ, ಒಮ್ಮೆಲೆ ಜನರು ಹೊರಬರಲು ಆರಂಭಿಸಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿದೆ. ಘಟನೆ ವೇಳೆ ಸ್ಥಳದಲ್ಲಿ ಬಹುತೇಕ ಮಂದಿ ಯುವಕ ಹಾಗೂ ಯುವತಿಯರೇ ಇದ್ದರೆಂದು ತಿಳಿದುಬಂದಿದೆ. 
ಘಟನೆಯಲ್ಲಿ ಮೂವರು ಯುವತಿಯರು, ಇಬ್ಬರು ಯುವಕರು ಹಾಗೂ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಜನರನ್ನು ರಕ್ಷಣೆ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.