ನೇಪಾಳ: ನದಿಗೆ ಉರುಳಿ ಬಿದ್ದ ಮಿನಿ ಟ್ರಕ್ , 18 ದುರ್ಮರಣ , 16 ಮಂದಿಗೆ ಗಾಯ
ಮಿನಿ ಟ್ರಕ್ ಒಂದು ಸುಮಾರು 400 ಮೀಟರ್ ಎತ್ತರದಿಂದ ನದಿಗೆ ಉರುಳಿ ಬಿದ್ದ ಪರಿಣಾಮ 18 ಜನರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿರುವ ಘಟನೆ ನೇಪಾಳದಲ್ಲಿ ನಡೆದಿದೆ.

ಕಠ್ಮಂಡು: ಮಿನಿ ಟ್ರಕ್ ಒಂದು ಸುಮಾರು 400 ಮೀಟರ್ ಎತ್ತರದಿಂದ ನದಿಗೆ ಉರುಳಿ ಬಿದ್ದ ಪರಿಣಾಮ 18 ಜನರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿರುವ ಘಟನೆ ನೇಪಾಳದಲ್ಲಿ ನಡೆದಿದೆ.
ನುವಾಕೊಟ್ ಜಿಲ್ಲೆಯ ಶಿಕಾರ್ ಬೆಸಿಯಿಂದ ಗೈಯಾಂಗ್ ಪೆಡಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಟ್ರಕ್ ದುಪ್ಚೇಶ್ವರ್ ಬಳಿ ಅಪಘಾತಕ್ಕೊಳಗಾಗಿ 18 ಮಂದಿ ದುರ್ಮರಣ ಹೊಂದಿದ್ದಾರೆ.
ಶುಕ್ರವಾರ ಸಂಜೆ 5 ಗಂಟೆ ಸುಮಾರಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ನುವಾಕೊಟ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಮ್ ಲಾಲ್ ಬಾಟ್ಟರೈ ತಿಳಿಸಿದ್ದಾರೆ.
ಮಿನಿ ಟ್ರಕ್ ನಲ್ಲಿ ಅಂತ್ಯಸಂಸ್ಕಾರವೊಂದಕ್ಕೆ ಹೋಗಿದ್ದ ಪ್ರಯಾಣಿಕರು ವಾಪಾಸ್ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಖಚಿತ ಮಾಹಿತಿ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂಬುದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


