ಕಾಶ್ಮೀರದಲ್ಲಿ ನಾಗರಿಕರ ಹತ್ಯೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಖಂಡನೆ!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಭಾರತೀಯ ಸೇನೆಯ ಗುಂಡಿನ ದಾಳಿಗೆ ಏಳು ಮಂದಿ ನಾಗರೀಕರು ಮೃತಪಟ್ಟಿದ್ದು ಈ...

Published On :
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಭಾರತೀಯ ಸೇನೆಯ ಗುಂಡಿನ ದಾಳಿಗೆ ಏಳು ಮಂದಿ ನಾಗರೀಕರು ಮೃತಪಟ್ಟಿದ್ದು ಈ ಘಟನೆಯನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಇಮ್ರಾನ್ ಖಾನ್ ಕಾಶ್ಮೀರ ಸಮಸ್ಯೆಗೆ ಮಾತುಕತೆ ಮೂಲಕ ಪರಿಹಾರ ಹುಡುಕಬಹುದೆ ಹೊರತು ಹಿಂಸೆ ಹಾಗೂ ಹತ್ಯೆಯಿಂದಲ್ಲ ಎಂದು ಟ್ವೀಟಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೇನೆ ಮತ್ತು ಉಗ್ರರ ನಡುವಿನ ಎನ್ ಕೌಂಟರ್ ಬೆನ್ನಲ್ಲೇ ಸ್ಥಳೀಯರಿಂದ ಹಿಂಸಾಚಾರ ಭುಗಿಲೆದ್ದಿದ್ದು, ಈ ವೇಳೆ ಸೇನೆ ನಡೆಸಿದ ದಾಳಿಯಲ್ಲಿ 7 ಮಂದಿ ನಾಗರಿಕರು ಸಾವನ್ನಪ್ಪಿದ್ದರು.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಸಿರ್ನೂ ಗ್ರಾಮದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನಾಧಿಕಾರಿಗಳು ತುರ್ತು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಸೈನಿಕರು ಹತ್ಯೆಗೈದಿದ್ದರು. ಸೇನೆ ತಮ್ಮನ್ನು ಸುತ್ತುವರೆಯುತ್ತಿದ್ದಂತೆಯೇ ಭಯಭೀತ ಗೊಂಡ ಉಗ್ರರು ಏಕಾಏಕಿ ಸೈನಿಕರತ್ತ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ ಉಗ್ರರು ಹತರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಉಗ್ರರುಇಮ್ರಾನ್ ಖಾನ್Imran Khanಶ್ರೀನಗರPakistanterroristsಪಾಕಿಸ್ತಾನಜಮ್ಮು ಮತ್ತು ಕಾಶ್ಮೀರJammu and Kashmirಭಾರತೀಯ ಸೇನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


