ವಿದೇಶ

ಯುಎಇ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಎನ್ಆರ್ ಐ ಯುವತಿ!

ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ತನ್ನ ಫೋಟೋಗೆ ಟ್ರೋಲ್ ಮಾಡಿದ್ದಕ್ಕಾಗಿ ಮನನೊಂದ ಭಾರತೀಯ ಮೂಲದ ಯುವತಿ 20 ವರ್ಷದ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಯುಎಇಯ ಶಾರ್ಜಾದಲ್ಲಿ ನಡೆದಿದೆ.

ಯುಎಇ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಎನ್ಆರ್ ಐ ಯುವತಿ!
ಯುಎಇ: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಎನ್ಆರ್ ಐ ಯುವತಿ!
Published On :
ಶಾರ್ಜಾ: ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ತನ್ನ ಫೋಟೋಗೆ ಟ್ರೋಲ್ ಮಾಡಿದ್ದಕ್ಕಾಗಿ ಮನನೊಂದ ಭಾರತೀಯ ಮೂಲದ ಯುವತಿ 20 ವರ್ಷದ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಯುಎಇಯ ಶಾರ್ಜಾದಲ್ಲಿ ನಡೆದಿದೆ. 
ಆತ್ಮಹತ್ಯೆ ಮಾಡಿಕೊಳ್ಳುವ ವಿಡಿಯೋವನ್ನು ಯುವತಿ ಲೈವ್ ಸ್ಟ್ರೀಮಿಂಗ್ ಮಾಡುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾಳೆ. ತಕ್ಷಣವೇ ಎಚ್ಚೆತ್ತ ಪೊಲೀಸರು ಯುವತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಲೀಜ್ ಟೈಮ್ಸ್ ವರದಿಯ ಪ್ರಕಾರ, ದುಬೈ ಪೊಲೀಸ್ ಇಲಾಖೆಯ ಸೈಬರ್ ಕ್ರೈಮ್ ಪ್ಯಾಟ್ರೋಲ್ ವಿಭಾಗವದವರು ಶಾರ್ಜಾದಲ್ಲಿರುವ ಸಿಬ್ಬಂದಿಗಳಿಗೆ ಯುವತಿ ಆತ್ಮಹತ್ಯೆಯ ವಿಷಯವನ್ನು ಮುಟ್ಟಿಸಿದ್ದಾರೆ. 
ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗೊಳಗಾಗಿದ್ದರಿಂದ ಯುವತಿ ತೀವ್ರವಾಗಿ ಖಿನ್ನತೆಗೊಳಗಾಗಿ ಆತ್ಮಹತ್ಯೆ ನಿರ್ಧಾರ ಮಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಳಿಸಿದ್ದ ಮೆಸೇಜ್ ನ ಲೊಕೇಷನ್ ನ್ನು ತಲುಪಿದ ಪೊಲೀಸರು ಯುವತಿಯನ್ನು ಆತ್ಮಹತ್ಯೆಯಿಂದ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.