ಕ್ಯೂಬಾ ಮಾಜಿ ಅಧ್ಯಕ್ಷ ಫಿಡೆಲ್ ಕ್ಯಾಸ್ಟ್ರೋ ಹಿರಿಯ ಪುತ್ರ ಆತ್ಮಹತ್ಯೆಗೆ ಶರಣು!
ಕ್ಯೂಬಾದ ಮಾಜಿ ಅಧ್ಯಕ್ಷ ದಿವಂಗತ ಫಿಡೆಲ್ ಕ್ಯಾಸ್ಟ್ರೋ ಅವರ ಹಿರಿಯ ಪುತ್ರ ಡಯಾಜ್ ಬಲಾರ್ಟ್ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Published On :
ಹವಾನಾ: ಕ್ಯೂಬಾದ ಮಾಜಿ ಅಧ್ಯಕ್ಷ ದಿವಂಗತ ಫಿಡೆಲ್ ಕ್ಯಾಸ್ಟ್ರೋ ಅವರ ಹಿರಿಯ ಪುತ್ರ ಡಯಾಜ್ ಬಲಾರ್ಟ್ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
68 ವರ್ಷದ ಡಯಾಜ್ ಬಲಾರ್ಟ್ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಕ್ಯೂಬಾ ಮಾಧ್ಯಮಗಳು ವರದಿ ಮಾಡಿದ್ದು, ಬಲಾರ್ಟ್ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.
ತಂದೆ ಫಿಡೆಲ್ ಕ್ಯಾಸ್ಟ್ರೋರನ್ನು ಡಯಾಜ್ ಬಲಾರ್ಟ್ ಬಹುತೇಕ ಹೋಲುತ್ತಿದ್ದ ಕಾರಣ ಅವರನ್ನು Fidelito (ಫಿಡೆಲಿಟೋ) ಎಂದೇ ಗುರುತಿಸಲಾಗುತ್ತಿತ್ತು. ಮಾನಸಿಕ ಒತ್ತಡ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದ ಡಯಾಜ್ ಹಲವು ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗಿರಲಿಲ್ಲ. ಇದರಿಂದ ಬೇಸತ್ತು ಡಯಾಜ್ ಬಲಾರ್ಟ್ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವರದಿ ಮಾಡಲಾಗಿದೆ.
ಇನ್ನು ಡಯಾಜ್ ಬಲಾರ್ಟ್ ಅವರು ಕ್ಯೂಬನ್ ಅಕಾಡೆಮಿ ಆಫ್ ಸೈನ್ಸ್ ನ ಉಪಾಧ್ಯಕ್ಷರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


