ವಿದೇಶ

ಭಯೋತ್ಪಾದನೆ ತಡೆಗೆ ಅಫ್ಘಾನ್ ಗಡಿಯಲ್ಲಿ ಬೇಲಿ ನಿರ್ಮಾಣಕ್ಕೆ ಹಣ ನೀಡಿ: ಟ್ರಂಪ್‍ಗೆ ಪಾಕ್

ಆಫ್ಗಾನಿಸ್ತಾನದೊಂದಿಗೆ ವಿವಾದಿತ ಗಡಿಯುದ್ದಕ್ಕೂ ಬೇಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಹಣ ಸಹಾಯ ಮಾಡುವಂತೆ ಅಮೆರಿಕಕ್ಕೆ ಪಾಕಿಸ್ತಾನ ಸಹಾಯ ಹಸ್ತ ಚಾಚಿದೆ...

ಭಯೋತ್ಪಾದನೆ ತಡೆಗೆ ಅಫ್ಘಾನ್ ಗಡಿಯಲ್ಲಿ ಬೇಲಿ ನಿರ್ಮಾಣಕ್ಕೆ ಹಣ ನೀಡಿ: ಟ್ರಂಪ್‍ಗೆ ಪಾಕ್
ಸಂಗ್ರಹ ಚಿತ್ರ
Published On :
ಇಸ್ಲಾಮಾಬಾದ್: ಆಫ್ಗಾನಿಸ್ತಾನದೊಂದಿಗೆ ವಿವಾದಿತ ಗಡಿಯುದ್ದಕ್ಕೂ ಬೇಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಹಣ ಸಹಾಯ ಮಾಡುವಂತೆ ಅಮೆರಿಕಕ್ಕೆ ಪಾಕಿಸ್ತಾನ ಸಹಾಯ ಹಸ್ತ ಚಾಚಿದೆ.
ಅಫ್ಘಾನಿಸ್ತಾನದೊಂದಿಗೆ 2,343 ಕಿ.ಮೀ ಪರ್ವತ ಪ್ರದೇಶದ ಗಡಿಯ ಉದ್ದಕ್ಕೂ ಬೇಲಿ ನಿರ್ಮಾಣ ಮಾಡುವ ಕಾರ್ಯಕ್ಕೆ ಪಾಕಿಸ್ತಾನ ಸರ್ಕಾರ ಮುಂದಾಗಿದ್ದು ಹಣಕಾಸಿನ ಕೊರತೆಯಿಂದಾಗಿ ಶೇಕಡ 10ರಷ್ಟು ಕಾರ್ಯ ಮಾತ್ರ ಪೂರ್ಣಗೊಂಡಿದ್ದು ಇನ್ನುಳಿಂದ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಹಣ ಸಹಾಯ ನೀಡುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರಕ್ಕೆ ಪಾಕಿಸ್ತಾನ ಮನವಿ ಮಾಡಿದೆ. 
2019ರ ಅಂತ್ಯದ ವೇಳೆಗೆ ಗಡಿಯಲ್ಲಿ ಬೇಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಖವಾಜಾ ಮೊಹಮ್ಮದ್ ಆಸೀಫ್ ಹೇಳಿದ್ದಾರೆ. 
ಬೇಲಿ ನಿರ್ಮಾಣ ಕಾರ್ಯಕ್ಕೆ ಹೆಚ್ಚಿನ ವೆಚ್ಚವಾಗುವುದಿಲ್ಲ. ಆದರೆ ಭಯೋತ್ಪಾದಕರ ವಿರುದ್ಧದ ಹೋರಾಟಕ್ಕೆ ಅಮೆರಿಕಕ್ಕೆ ಹೆಚ್ಚಿನ ಹಣ ವೆಚ್ಚವಾಗುತ್ತದೆ ಎಂದು ಇಸ್ಲಾಮಾಬಾದ್ ನಲ್ಲಿ ಸಂದರ್ಶನವೊಂದರಲ್ಲಿ ಖವಾಜ ಮೊಹಮ್ಮದ್ ಹೇಳಿದ್ದಾರೆ. 
ಭಯೋತ್ಪಾದಕರಿಗೆ ಪಾಕಿಸ್ತಾನ ಸ್ವರ್ಗವಾಗಿದೆ. ಪಾಕಿಸ್ತಾನ ನಮಗೆ ಬರೀ ಸುಳ್ಳು ಹೇಳಿ, ಮೋಸ ಮಾಡಿದೆ ಎಂದು ಆರೋಪಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಕ್ಕೆ ಡಾಲರ್ 2 ಶತಕೋಟಿ ಮೌಲ್ಯದ ಮಿಲಿಟರಿ ಸಹಾಯ ಧನವನ್ನು ಅಮಾನತ್ತುಗೊಳಿಸಿದ್ದಾರೆ ಎಂದು ಹೇಳಿದರು.
ಆಫ್ಗಾನ್ ಗಡಿಯಲ್ಲಿ ಬೇಲಿ ನಿರ್ಮಾಣ ಮಾಡುವುದರಿಂದ ಉಭಯ ದೇಶಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ತಡೆಗಟ್ಟಬಹುದು ಎಂದು ಅಸೀಫ್ ಹೇಳಿದ್ದಾರೆ. ದೇಶದಲ್ಲಿ ಶಾಂತಿ ಸ್ಥಾಪನೆಗಾಗಿ 2 ದಶಲಕ್ಷಕ್ಕಿಂತಲೂ ಹೆಚ್ಚು ಆಫ್ಘಾನ್ ನಿರಾಶ್ರಿತರನ್ನು ಹಿಂದಿಕ್ಕೆ ಕಳುಹಿಸಬೇಕು ಎಂದು ಪಾಕಿಸ್ತಾನ ಪರಿಗಣಿಸಿದೆ ಎಂದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.