ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಪ್ರಧಾನಿ ಶಂಕುಸ್ಥಾಪನೆ
ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರಮೋದಿ ಅರಬ್ ರಾಷ್ಟ್ರ ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಅಬುದಾಬಿ : ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರಮೋದಿ ಅರಬ್ ರಾಷ್ಟ್ರ ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಭಾರತೀಯ ಮೂಲದ ಮೂರು ಮಿಲಿಯನ್ ಜನರು ಇಲ್ಲಿ ವಾಸಿಸುತ್ತಿದ್ದು,ದುಬೈ- ಅಬು ದಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೊದಲ ಬಾರಿಗೆ ಹಿಂದೂ ದೇವಾಲಯ ನಿರ್ಮಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ಟೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.
2015ರ ನಂತರ ಎರಡನೇ ಬಾರಿಗೆ ಪ್ರಧಾನಿ ನರೇಂದ್ರಮೋದಿ ಅರಬ್ ರಾಷ್ಟ್ರಕ್ಕೆ ಭೇಟಿ ನೀಡಿದ್ದಾರೆ. 55 ಸಾವಿರ ಚದರ ಮೀಟರ್ ವಿಸ್ತೀರ್ಣದಲ್ಲಿ ಅಬುದಾಬಿಯಲ್ಲಿ ಮೊದಲ ಹಿಂದೂ ದೇವಾಲಯ ನಿರ್ಮಾಣವಾಗುತ್ತಿದ್ದು, ಶಂಕುಸ್ಥಾಪನೆ ಸಮಾರಂಭ ಐತಿಹಾಸಿಕವಾದದ್ದು ಎಂದು ಯುಎಇನ ಭಾರತೀಯ ರಾಯಬಾರಿ ನವ್ ದೀಪ್ ಸಿಂಗ್ ಸೂರಿ ತಿಳಿಸಿದ್ದಾರೆ.
ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನರೇಂದ್ರಮೋದಿ ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ದುಬೈನ ಒಪೇರಾ ಹೌಸ್ ನಲ್ಲಿ ಭಾರತೀಯ ಸಮುದಾಯಗಳೊಂದಿಗೆ ನರೇಂದ್ರಮೋದಿ ಮಾತುಕತೆ ನಡೆಸಿದರು. ವಿವಿಧ ವೃತ್ತಿಪರ ಹಾಗೂ ಸಂಘಟನೆಗಳ ಪ್ರತಿನಿಧಿಗಳು ಇದರಲ್ಲಿ ಪಾಲ್ಗೊಂಡಿದ್ದರು ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


