71 ಮಂದಿ ಪ್ರಯಾಣಿಕರಿದ್ದ ರಷ್ಯಾ ಪ್ಯಾಸೆಂಜರ್ ವಿಮಾನ ಪತನ, ಎಲ್ಲ ಪ್ರಯಾಣಿಕರ ಸಾವು!
ಸುಮಾರು 71 ಪ್ರಯಾಣಿಕರಿದ್ದ ಪ್ರಯಾಣಿಕ ವಿಮಾನವೊಂದು ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಭಾನುವಾರ ಪತನವಾಗಿದೆ ಎಂದು ತಿಳಿದುಬಂದಿದೆ.

Published On :
ಮಾಸ್ಕೋ: ಸುಮಾರು 71 ಪ್ರಯಾಣಿಕರಿದ್ದ ಪ್ರಯಾಣಿಕ ವಿಮಾನವೊಂದು ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಭಾನುವಾರ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮಾಸ್ಕೋದ ಡೊಮೊಡೆಡೋವೊ ವಿಮಾನ ನಿಲ್ದಾಣದ ಹೊರ ಆವರಣದಲ್ಲಿ ಅಂಟಾನೋವ್ ಎಎನ್ 148 ವಿಮಾನ ಪತನವಾಗಿದ್ದು, ವಿಮಾನದಲ್ಲಿ 6 ಮಂದಿ ಸಿಬ್ಬಂದಿ ಸೇರಿ ಒಟ್ಟು 71 ಮಂದಿ ಪ್ರಯಾಣಿಕರು ಇದ್ದರು. ಈ ಪೈಕಿ ಎಲ್ಲ ಪ್ರಯಾಣಿಕರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪ್ರಾದೇಶಿಕ ವಿಮಾನಯಾನ ಸಂಸ್ಥೆ ಸರತೋವ್ ಏರ್ ಲೈನ್ಸ್ ಗೆ ಸೇರಿದ ವಿಮಾನ ಎಂದು ತಿಳಿದುಬಂದಿದ್ದು, ವಿಮಾನ ಉರಲ್ಸ್ ನ ಓರ್ಸ್ಕ್ ನಗರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ಮಾಸ್ಕೋ ಹೊರವಲಯದ ರಮೆನ್ ಸ್ಕಿ ಪ್ರಾಂತ್ಯದಲ್ಲಿ ವಿಮಾನ ಪತನವಾಗಿದೆ. ಘಟನಾ ಸ್ಥಳಕ್ಕೆ 5ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


