ರಕ್ಷಣೆ, ಆರೋಗ್ಯ ವಲಯ ಸೇರಿದಂತೆ 8 ಒಪ್ಪಂದಗಳಿಗೆ ಭಾರತ-ಓಮನ್ ಸಹಿ
ಓಮನ್ ಸುಲ್ತಾನರೊಂದಿಗೆ ಸೋಮವಾರ ವಿಸ್ತಾರ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, 8 ಒಪ್ಪಂದಗಳಿಗೆ ಸಹಿ ಹಾಕಿದರು.ರಕ್ಷಣಾ ವಲಯದಲ್ಲ ಸಹಕಾರ, ಆರೋಗ್ಯ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ....

ಮಸ್ಕತ್: ಓಮನ್ ಸುಲ್ತಾನರೊಂದಿಗೆ ಸೋಮವಾರ ವಿಸ್ತಾರ ಮಾತುಕತೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ 8 ಒಪ್ಪಂದಗಳಿಗೆ ಸಹಿ ಹಾಕಿದರು. ರಕ್ಷಣಾ ವಲಯ,ಆರೋಗ್ಯ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪ್ರಮುಖ ಒಪ್ಪಂದಗಳು ಏರ್ಪಟ್ಟಿವೆ.
ತಮ್ಮ ಮೂರು ದೇಶಗಳ ಪ್ರವಾಸದ ಕೊನೆಯ ಭಾಗವಾಗಿ ದುಬೈಗೆ ನಿನ್ನೆ ಆಗಮಿಸಿದ ಪ್ರಧಾನಿ ಮೋದಿ, ಓಮನ್ ಸುಲ್ತಾನ ಖಬೂಸ್ ಬಿನ್ ಸೈದ್ ಅಲ್ ಸೈದ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸಿದರು. ವ್ಯಾ ಪಾರ, ಹೂಡಿಕೆ, ಇಂಧನ, ರಕ್ಷಣಾ ವಲಯ, ಭದ್ರತೆ, ಆಹಾರ ಭದ್ರತೆ ಸೇರಿದಂತೆ ಸ್ಥಳೀಯ ವಿಷಯಗಳನ್ನು ಬಲಪಡಿಸುವ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮಾತುಕತೆ ನಡೆಸಿದರು.
ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ನಕಾಶೆಯನ್ನು ಬರೆಯಲು ಹೊರಟಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಿಯೋಗ ಒಮನ್ ಸುಲ್ತಾನರೊಂದಿಗೆ ನಿಯೋಗ ಮಟ್ಟದ ಮಾತುಕತೆ ನಡೆಸುತ್ತಿದ್ದಾರೆ. ಇಬ್ಬರು ವ್ಯಾಪಾರ, ಹೂಡಿಕೆ, ಇಂಧನ, ಭದ್ರತೆ ಸೇರಿದಂತೆ ಹಲವು ವಿಷಯಗಳಲ್ಲಿ ಸಹಕಾರ ವರ್ಧನೆಗೆ ಕಾರ್ಯತಂತ್ರ ಸಹಭಾಗಿತ್ವವನ್ನು ವಹಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಒಮನ್ ದೇಶದ ಅಭಿವೃದ್ಧಿಯಲ್ಲಿ ಭಾರತೀಯರ ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮವನ್ನು ಸುಲ್ತಾನ್ ಖಬೂಸ್ ಇದೇ ಸಂದರ್ಭದಲ್ಲಿ ಪ್ರಶಂಸಿಸಿದರು.
ಒಮನ್ ಸುಲ್ತಾನ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದ್ವಿಪಕ್ಷೀಯ ಮಾತುಕತೆ ನಂತರ ನಾಗರಿಕ ಮತ್ತು ವಾಣಿಜ್ಯ ವಿಷಯಗಳಲ್ಲಿ ಕಾನೂನು ಮತ್ತು ನ್ಯಾಯಾಂಗ ಸಹಕಾರದ ವಿಷಯಗಳಲ್ಲಿ ನಿಲುವಳಿ ಒಪ್ಪಂದ ಸೇರಿದಂತೆ 8 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು.
ವಿದೇಶಾಂಗ ಸೇವೆ ಸಂಸ್ಥೆ, ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಭಾರತ ಮತ್ತು ಓಮನ್ ರಾಜತಾಂತ್ರಿಕ ಸಂಸ್ಥೆ, ಶೈಕ್ಷಣಿಕ ಮತ್ತು ಪಾಂಡಿತ್ಯ ವಿಷಯಗಳ ಸಹಕಾರಗಳಿಗೆ ಸಂಬಂಧಪಟ್ಟಂತೆ ಕೂಡ ಎರಡೂ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


