ಮೆಕ್ಸಿಕೊದಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 7.2 ತೀವ್ರತೆ ದಾಖಲು!
ಆಗ್ನೇಯ ಮೆಕ್ಸಿಕೊದಲ್ಲಿ ಶುಕ್ರವಾರ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.2 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ.

Published On :
ಮೆಕ್ಸಿಕೋ: ಆಗ್ನೇಯ ಮೆಕ್ಸಿಕೊದಲ್ಲಿ ಶುಕ್ರವಾರ ತಡರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.2 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ.
ಆಗ್ನೆಯ ಮೆಕ್ಸಿಕೋದ ಹಲವು ರಾಜ್ಯಗಳಲ್ಲಿ ಭೂಕಂಪನ ಸಂಭವಿಸಿದ್ದು, ಜನರು ಭಯಭೀತರಾಗಿ ರಾತ್ರಿ ಇಡೀ ಕಾಲ ಕಳೆದಿರುವ ಬಗ್ಗೆ ವರದಿಯಾಗಿದೆ. ಭೂಕಂಪನ ಮಾಪನ ಕೇಂದ್ರದ ಅಧಿಕಾರಿಗಳು ತಿಳಿಸಿರುವಂತೆ ರಿಕ್ಟರ್ ಮಾಪಕದಲ್ಲಿ 7.2ರಷ್ಟು ತೀವ್ರತೆ ದಾಖಲಾಗಿದೆ ಎಂದು ಹೇಳಿದ್ದಾರೆ. ಓಕ್ಸಾಕ ಮತ್ತು ಪ್ಯುಬ್ಲಾ ರಾಜ್ಯಗಳಲ್ಲೂ ಭೂಕಂಪ ಸಂಭವಿಸಿದ್ದು, ಭೂಕಂಪದ ಕೇಂದ್ರ ಬಿಂದು ಒಕ್ಸಾಕೋದ ಪಿನೋತೆಪಾ ಡೆ ಡಾನ್ ಲೂಯಿಸ್ ನಗರದ ನೈರುತ್ಯಕ್ಕೆ 37 ಕಿಲೋಮೀಟರ್ ದೂರದಲ್ಲಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಪ್ರಬಲ ಭೂಕಂಪನದ ಹೊರತಾಗಿಯೂ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿಲ್ಲ, ಆದರೆ ಭೂಕಂಪನದ ತೀವ್ರತೆಗೆ ಹಲವು ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಆದರೆ ಯಾವುದೇ ರೀತಿಯ ಪ್ರಾಣ ಹಾನಿಯಾದ ಕುರಿತು ವರದಿಯಾಗಿಲ್ಲ.
ಕಳೆದ ವರ್ಷ ಸಪ್ಟಂಬರ್ 7 ರಂದು ಮೆಕ್ಸಿಕೊದಲ್ಲಿ ಸಂಭವಿಸಿದ 8.2 ತೀವ್ರತೆಯ ಭೂಕಂಪದಲ್ಲಿ 96 ಮಂದಿ ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


