ಧೈರ್ಯವಿದ್ದರೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ, ನಿರೂಪಕಿ ಒಪ್ರಾ ವಿರುದ್ಧ ಟ್ರಂಪ್ ಕಿಡಿ!
ಅಮೆರಿಕದ ಖ್ಯಾತ ಟಿವಿ ಕಾರ್ಯಕ್ರಮ ನಿರೂಪಕಿ ಒಪ್ರಾ ವಿನ್ ಫ್ರೇ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಿಡಿಕಾರಿದ್ದು, ಧೈರ್ಯವಿದ್ದರೆ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸವಾಲೆಸೆದಿದ್ದಾರೆ.

Published On :
ವಾಷಿಂಗ್ಟನ್: ಅಮೆರಿಕದ ಖ್ಯಾತ ಟಿವಿ ಕಾರ್ಯಕ್ರಮ ನಿರೂಪಕಿ ಒಪ್ರಾ ವಿನ್ ಫ್ರೇ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಿಡಿಕಾರಿದ್ದು, ಧೈರ್ಯವಿದ್ದರೆ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸವಾಲೆಸೆದಿದ್ದಾರೆ.
ತಮ್ಮ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಿರುವ ಟಿವಿ ನಿರೂಪಕಿ ಒಪ್ರಾ ವಿನ್ ಫ್ಲೇ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಕಿಡಿಕಾರಿದ್ದು, ಒಪ್ರಾ ಅವರಿಗೆ ಅಭದ್ರತೆ ಕಾಡುತ್ತಿದೆ. ಹೀಗಾಗಿ ಅವರು ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ನಿಜಕ್ಕೂ ಅವರ ಆರೋಪಗಳು ನಿಜವಾಗಿದ್ದರೆ, ಅವರು ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲಿ. ತಮ್ಮ ಆರೋಪಗಳನ್ನು ಜನರ ಮುಂದಿಡಲಿ. ಆಗ ಜನರೇ ನಿರ್ಧರಿಸುತ್ತಾರೆ. ಯಾರು ಸತ್ಯವಂತರು ಎಂದು. ಧೈರ್ಯವಿದ್ದರೆ ಒಪ್ರಾ ಚುನಾವಣೆಗೆ ಸ್ಪರ್ಧಿಸಲಿ. ಅವರ ಎಲ್ಲ ರಹಸ್ಯಗಳನ್ನು ನಾನು ಜನರ ಮುಂದೆ ತೆರೆದಿಡುತ್ತೇನೆ. ಆ ಮೂಲಕ ಅವರನ್ನು ಖಂಡಿತವಾಗಿಯೂ ಸೋಲಿಸುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.
ಇನ್ನು ಈ ಹಿಂದೆ ತಮ್ಮ ಟಿವಿ ಕಾರ್ಯಕ್ರಮದಲ್ಲಿ ಒಪ್ರಾ ಅವರು ಕೆಲ ಮಿಚಿಗನ್ ಮತದಾರರನ್ನು ಸಂದರ್ಶನ ಮಾಡಿದ್ದರು. ಈ ಸಂದರ್ಶನವೇ ಟ್ರಂಪ್ ಆಕ್ರೋಶಕ್ಕೆ ಕಾರಣವಾಗಿದ್ದು, ಕಾರ್ಯಕ್ರಮದಲ್ಲಿ ಉದ್ದೇಶ ಪೂರ್ವಕವಾಗಿ ಟ್ರಂಪ್ ಆಡಳಿತದಲ್ಲಿ 1 ವರ್ಷದ ಸರ್ಕಾರವನ್ನು ಟೀಕಿಸಲಾಗಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಟ್ರಂಪ್, ಒಪ್ರಾ ಅವರನ್ನು ನಾನು ಚೆನ್ನಾಗಿ ಬಲ್ಲೆ, ತಮ್ಮ ಸುಳ್ಳಿನ ಕಂತೆಗಳ ಮೂಲಕವೇ ಅವರು ಖ್ಯಾತಿ ಗಳಿಸಿದ್ದಾರೆ. ಇದೀಗ ನನ್ನ ಮತ್ತ ನನ್ನ ಸರ್ಕಾರದ ವಿರುದ್ಧ ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Washingtonವಾಷಿಂಗ್ಟನ್US Presidentಅಮೆರಿಕ ಅಧ್ಯಕ್ಷDonald Trumpಡೊನಾಲ್ಡ್ ಟ್ರಂಪ್Oprah Winfreyಒಪ್ರಾ ವಿನ್ ಫ್ರೇ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


