ಚಲಿಸುತ್ತಿದ್ದ ಬಸ್‌ಗೆ ಬೆಂಕಿ: 52 ಮಂದಿ ಸಜೀವ ದಹನ
ವಾಯುವ್ಯ ಖಜಕಿಸ್ತಾನದಲ್ಲಿ ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 52 ಮಂದಿ ಸಜೀವ ದಹನವಾಗಿದ್ದಾರೆ ಎಂದು ತುರ್ತು ಸೇವೆಗಳ ಇಲಾಖೆ ಪ್ರಕಟನೆಯಲ್ಲಿ...

Published On :
ಅಸ್ಟಾನಾ: ವಾಯುವ್ಯ ಖಜಕಿಸ್ತಾನದಲ್ಲಿ ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 52 ಮಂದಿ ಸಜೀವ ದಹನವಾಗಿದ್ದಾರೆ ಎಂದು ತುರ್ತು ಸೇವೆಗಳ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.
55 ಪ್ರಯಾಣಿಕರು ಮತ್ತು ಇಬ್ಬರು ಚಾಲಕರು ಪ್ರಯಾಣಿಸುತ್ತಿದ್ದ ಬಸ್ ಗೆ ಬೆಳಗ್ಗೆ 10.30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡು ಬಸ್ ನಲ್ಲಿದ್ದ 52 ಮಂದಿ ಮೃತಪಟ್ಟಿದ್ದಾರೆ. ಇನ್ನುಳಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನು ತಿಳಿದುಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


