ಭಯೋತ್ಪಾದನೆ: ವಿಶ್ವಸಂಸ್ಥೆಯಲ್ಲಿ ಭಾರತ, ಅಮೆರಿಕ, ಅಫ್ಘಾನಿಸ್ತಾನಕ್ಕೆ ಪಾಕಿಸ್ತಾನ ಟಾರ್ಗೆಟ್
ಪಾಕಿಸ್ತಾನ ಉತ್ತಮ ಉಗ್ರರು ಮತ್ತು ಕೆಟ್ಟ ಉಗ್ರರು ಎಂದು ಪ್ರತ್ಯೇಕಿಸುವ ತನ್ನ ಮನಸ್ಥಿತಿಯನ್ನು ಮೊದಲು ಬದಲಾಯಿಸಿಕೊಳ್ಳಬೇಕು ಎಂದು ಭಾರತ ಶನಿವಾರ....

Published On :
ವಿಶ್ವಸಂಸ್ಥೆ: ಪಾಕಿಸ್ತಾನ ಉತ್ತಮ ಉಗ್ರರು ಮತ್ತು ಕೆಟ್ಟ ಉಗ್ರರು ಎಂದು ಪ್ರತ್ಯೇಕಿಸುವ ತನ್ನ ಮನಸ್ಥಿತಿಯನ್ನು ಮೊದಲು ಬದಲಾಯಿಸಿಕೊಳ್ಳಬೇಕು ಎಂದು ಭಾರತ ಶನಿವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಒತ್ತಾಯಿಸಿದೆ.
ವಿಶ್ವಸಂಸ್ಥೆಯ ಭದ್ರಾತ ಮಂಡಳಿ ಸಭೆಯಲ್ಲಿ ಮಾತನಾಡಿದ ಭಾರತದ ರಾಯಭಾರಿ ಸಯೀದ್ ಅಕ್ಬರುದ್ದೀನ್ ಅವರು, ಪಾಕಿಸ್ತಾನದ ಗಡಿಗಳು ಉಗ್ರರ ಸ್ವರ್ಗವಾಗುತ್ತಿದ್ದು, ಭಯೋತ್ಪಾದನೆ ಒಡ್ಡಿದ ಸವಾಲುಗಳತ್ತ ಗಮನ ಹರಿಸಿ, ಗಡಿಯಾಚೆಯಿರುವ ಉಗ್ರರ ಸ್ವರ್ಗಗಳನ್ನು ನಾಶಪಡಿಸಿ ಎಂದು ಆಗ್ರಹಿಸಿದರು.
ಅಫ್ಘಾನಿಸ್ತಾನ ಜಗತ್ತಿನಲ್ಲಿ ತನ್ನ ಸ್ಥಾನವನ್ನು ಮರಳಿ ಗಳಿಸಿಕೊಳ್ಳುವುದನ್ನು ಭಾರತ ಬಯಸುತ್ತದೆ. ಅಫ್ಘಾನಿಸ್ತಾನದಲ್ಲಿ ಶಾಂತಿ, ಭದ್ರತೆ, ಸ್ಥಿರತೆ ಮತ್ತು ಸಮೃದ್ಧಿ ತರುವಲ್ಲಿ ಪ್ರಾದೇಶಿಕ ಹಾಗೂ ಅಂತಾರಾಷ್ಟ್ರೀಯ ಪಾಲುದಾರರ ಜತೆ ಭಾರತ ನಿಕಟವಾಗಿ ಕೆಲಸ ಮಾಡಲು ಬದ್ಧವಾಗಿದೆ ಎಂದು ಅಕ್ಬರುದ್ದೀನ್ ಸ್ಪಷ್ಟಪಡಿಸಿದರು.
ಇದಕ್ಕೆ ಮೊದಲು ಮಾತನಾಡಿದ ಅಮೆರಿಕ ಪ್ರತಿನಿಧಿ, ಪಾಕಿಸ್ತಾನದಲ್ಲಿ ಭಯೋತ್ಪಾದಕರ ಸುರಕ್ಷಿತ ಸ್ವರ್ಗದ ಯಥಾಸ್ಥಿತಿಯನ್ನು ಒಪ್ಪಿಕೊಳ್ಳಲಾಗದು ಎಂದು ಸಾರಿದರು. ಈ ಮೂಲಕ ಭಾರತ, ಆಫ್ಘಾನಿಸ್ತಾನ ಮತ್ತು ಅಮೆರಿಕ ದೇಶಗಳ ಪ್ರತಿನಿಧಿಗಳು ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದು, ಪಾಕಿಸ್ತಾನ ಉಗ್ರರ ಸ್ವರ್ಗವಾಗುತ್ತಿದೆ. ಮೊದಲು ತನ್ನ ನಿಲುವನ್ನು ಬದಲಿಸಿಕೊಳ್ಳಬೇಕು. ಭಯೋತ್ಪಾದನೆಯಲ್ಲಿ ಒಳ್ಳೆಯ ಭಯೋತ್ಪಾದನೆ ಕೆಟ್ಟ ಭಯೋತ್ಪಾದನೆ ಎಂಬುದಿಲ್ಲ.. ಭಯೋತ್ಪಾದನೆಯಲ್ಲೂ ಇಂತಹ ದ್ವಿಮಾನದಂಡ ಸರಿಯಲ್ಲ ಎಂದು ಪಾಕಿಸ್ತಾನವನ್ನು ಟೀಕಿಸಿದ್ದವು. ಅಂತೆಯೇ ಈ ಬಗ್ಗೆ ಪಾಕಿಸ್ತಾನ ಸರ್ಕಾರ ಕಠಿಣ ನಿಲುವು ತಳೆಯಬೇಕು ಎಂದು ಒತ್ತಾಯಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


