ವಿದೇಶ

ಅಲಾಸ್ಕಾದಲ್ಲಿ 8.2 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಅಮೆರಿಕಾದ ಅಲಾಸ್ಕಾದಲ್ಲಿ ಮಂಗಳವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 8.2ರಷ್ಟು ದಾಖಲಾಗಿದೆ.

ಅಲಾಸ್ಕಾದಲ್ಲಿ 8.2 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ
ಸಾಂದರ್ಭಿಕ ಚಿತ್ರ
Published On :
ಅಂಕೋರೆಜ್‌(ಅಲಾಸ್ಕಾ): ಅಮೆರಿಕಾದ ಅಲಾಸ್ಕಾದಲ್ಲಿ ಮಂಗಳವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 8.2ರಷ್ಟು ದಾಖಲಾಗಿದೆ. 
ಇಲ್ಲಿಂದ 175 ಮೈಲುಗಳ ದೂರದಲ್ಲಿರುವ ಅಲಾಸ್ಕಾ ಕರಾವಳಿಯ ಕೋಡಿಯಾಕ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ.
ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.
ಅಲಾಸ್ಕಾದಲ್ಲಿ ಲಘು ಹಾಗೂ ಪ್ರಬಲ ಭೂಕಂಪ ಸಂಭವಿಸುವುದು ಸಾಮಾನ್ಯ. ಕೆಲವೊಮ್ಮೆ ಇಲ್ಲಿ 7.9ರಷ್ಟು ತೀವ್ರತೆಯ ಭೂಕಂಪನವಾಗುವುದೂ ಉಂಟು. ಆದರೆ ಇಂದು ಸಂಭವಿಸಿದ ಕಂಪನ ‘ದಶಕದಲ್ಲೇ ಪ್ರಬಲ’ವಾದುದು ಎನ್ನಲಾಗಿದೆ. 
ಹೆಚ್ಚಿನ ಮಾಹಿತಿ ನಿರೀಕ್ಷಿಸಿ...

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.