ಲಿಬಿಯಾದಲ್ಲಿ ಅವಳಿ ಕಾರ್ ಬಾಂಬ್ ಸ್ಫೋಟ, 33 ಸಾವು, 50 ಮಂದಿ ಗಾಯ
ಲಿಬಿಯಾದ ಬೆಂಘಾಝಿ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅವಳಿ ಕಾರ್ ಬಾಂಬ್ ಸ್ಫೋಟದಲ್ಲಿ ಕನಿಷ್ಚ 33 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Published On :
ಟ್ರಿಪೋಲಿ: ಲಿಬಿಯಾದ ಬೆಂಘಾಝಿ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅವಳಿ ಕಾರ್ ಬಾಂಬ್ ಸ್ಫೋಟದಲ್ಲಿ ಕನಿಷ್ಚ 33 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಘಾಝಿಯ ಆಲ್ ಸಲ್ಮಾನಿ ಜಿಲ್ಲೆಯಲ್ಲಿರುವ ಮಸೀದಿಯೊಂದರಿಂದ ಪ್ರಾಥನೆ ಮುಗಿಸಿ ಹೊರಗಡೆ ಬರುತ್ತಿದ್ದ ಸಂದರ್ಭದಲ್ಲಿ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮೊದಲ ಸ್ಫೋಟ ರಾತ್ರಿ 8.20ಕ್ಕೆ ಸಂಭವಿಸಿದ್ದು, ಇದಾದ ಕೇವಲ 10 ರಿಂದ 15 ನಿಮಿಷಗಳ ಅಂತರದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಈ ವೇಳೆ ಸಾವನ್ನಪ್ಪಿದವರ ಪೈಕಿ ಲಿಬಿಯಾ ಮತ್ತು ಅಂತಾರಾಷ್ಟ್ರೀಯ ಶಾಂತಿಪಾಲನಾ ಪಡೆಯ ಸೈನಿಕರು ಸೇರಿದ್ದಾರೆ ಎಂದು ತಿಳಿದುಬಂದಿದೆ.
ಮಸೀದಿಯ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಮರ್ಸೀಡೀಸ್ ಕಾರುಗಳಲ್ಲಿ ಉಗ್ರರು ಬಾಂಬ್ ಅಡಗಿಸಿ ಸ್ಫೋಟಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊದಲ ಸ್ಫೋಟ ಸಂಭವಿಸಿದ ಬೆನ್ನಲ್ಲೇ ಗಾಯಾಳುಗಳ ರಕ್ಷಣೆಗೆ ಸ್ಥಳಕ್ಕಾಗಮಿಸಿದ್ದ ಆ್ಯಂಬುಲೆನ್ಸ್ ಕೂಡ ಎರಡನೇ ಸ್ಫೋಟದ ವೇಳೆ ದಾಳಿಗೆ ತುತ್ತಾಗಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಲಾಗಿದೆ. ಅಂತೆಯೇ ಮೊದಲ ದಾಳಿಗಿಂತಲೂ ಎರಡನೇ ದಾಳಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಪ್ರಸ್ತುತ ಓರ್ವ ಶಂಕಿತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂತೆಯೇ ಈ ವರೆಗೂ ದಾಳಿ ಸಂಬಂಧ ಯಾವುದೇ ಉಗ್ರಸಂಘಟನೆ ಜವಾಬ್ದಾರಿ ಹೊತ್ತುಕೊಂಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


