ಪಾಕ್ ಜೈಲುಗಳಲ್ಲಿರುವ 471 ಭಾರತೀಯ ಕೈದಿಗಳ ಪಟ್ಟಿ ಭಾರತಕ್ಕೆ ಹಸ್ತಾಂತರ
ಪಾಕಿಸ್ತಾನದ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ 471 ಭಾರತೀಯ ಕೈದಿಗಳ ಪಟ್ಟಿಯನ್ನು ಪಾಕಿಸ್ತಾನ ಸರ್ಕಾರ ಭಾರತಕ್ಕೆ ಹಸ್ತಾಂತರಿಸಿದೆ...

Published On :
ಇಸ್ಲಾಮಾಬಾದ್: ಪಾಕಿಸ್ತಾನದ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ 471 ಭಾರತೀಯ ಕೈದಿಗಳ ಪಟ್ಟಿಯನ್ನು ಪಾಕಿಸ್ತಾನ ಸರ್ಕಾರ ಭಾರತಕ್ಕೆ ಹಸ್ತಾಂತರಿಸಿದೆ.
418 ಮೀನುಗಾರರು ಮತ್ತು ಅನಧಿಕೃತವಾಗಿ ಪಾಕ್ ಗೆ ಪ್ರವೇಶಿಸಿದ್ದ 53 ಭಾರತೀಯ ಕೈದಿಗಳ ಪಟ್ಟಿಯನ್ನು ಭಾರತೀಯ ಹೈ ಕಮೀಷನ್ ಅಧಿಕಾರಿಯೊಬ್ಬರಿಗೆ ಹಸ್ತಾಂತರಿಸಲಾಗಿದೆ.
2008 ಮೇ 21ರಂದು ಉಭಯ ರಾಷ್ಟ್ರಗಳು ಪರಸ್ಪರರ ಜೈಲಿನಲ್ಲಿರುವ ಕೈದಿಗಳ ಪಟ್ಟಿಯನ್ನು ವಿನಿಮಯ ಮಾಡಿಕೊಳ್ಳಬೇಕು ಎಂಬ ಒಪ್ಪಂದಕ್ಕೆ ಸಹಿ ಮಾಡಿದ್ದವು ಅದೇ ರೀತಿ ಪ್ರತಿವರ್ಷದ ಜನವರಿ 1ರಂದು ಮತ್ತು ಜುಲೈ 1ರಂದು ಕೈದಿಗಳ ಪಟ್ಟಿಯನ್ನು ಹಸ್ತಾಂತರಿಸಿಕೊಳ್ಳಲಿವೆ.
ಭಾರತ ಸಹ ತನ್ನಲ್ಲಿರುವ ಪಾಕಿಸ್ತಾನದ ಕೈದಿಗಳ ಪಟ್ಟಿಯನ್ನು ದೆಹಲಿಯಲ್ಲಿರುವ ಪಾಕಿಸ್ತಾನ ರಾಯಬಾರಿ ಅಧಿಕಾರಿಗಳಿಗೆ ಹಸ್ತಾಂತರಿಸುವ ನಿರೀಕ್ಷೆ ಇದೆ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


