ಮಾನಸ ಸರೋವರ ಯಾತ್ರೆ: ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 150 ಭಾರತೀಯರ ರಕ್ಷಣೆ
ಕಳೆದ 4 ದಿನಗಳಿಂದ ನೇಪಾಳ ಬಳಿಯ ಸಿಮಿಕೋಟ್ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಮಂಜಿನ ಹೊಡೆತದಿಂದ ಸಂಕಷ್ಟಕ್ಕೆ ಸಿಲುಕಿರುವ ಸಾವಿರಾರು ಭಾರತೀಯ ಪೈಕಿ 150 ಭಾರತೀಯರನ್ನು...

Published On :
ಕಠ್ಮಂಡು; ಕಳೆದ 4 ದಿನಗಳಿಂದ ನೇಪಾಳ ಬಳಿಯ ಸಿಮಿಕೋಟ್ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಾಗೂ ಮಂಜಿನ ಹೊಡೆತದಿಂದ ಸಂಕಷ್ಟಕ್ಕೆ ಸಿಲುಕಿರುವ ಸಾವಿರಾರು ಭಾರತೀಯ ಪೈಕಿ 150 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಸಿಮಿಕೋಟ್'ನಿಂದ 150 ಭಾರತೀಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
3,600 ಮೀಟರ್ ಎತ್ತರ ಹಿಲ್ಸಾದಲ್ಲಿ ಸಿಲುಕಿಕೊಂಡಿರುವ ಯಾತ್ರಿಕರನ್ನು ರಕ್ಷಣೆ ಮಾಡಲು ಯತ್ನಗಳನ್ನು ನಡೆಸುತ್ತಿದ್ದೇವೆ. ನೇಪಾಳ ಸರ್ಕಾರದ 11 ಹೆಲಿಕಾಪ್ಟರ್ ಗಳೂ ಕೂಡ ಕಾರ್ಯಾಚರಣೆ ನಡೆಸುತ್ತಿವೆ. ಕೆಲ ಖಾಸಗಿ ಕಂಪನಿಗಳ ಹೆಲಿಕಾಪ್ಟರ್ ಗಳೂ ಕಾರ್ಯಾಚರಣೆ ನಡೆಸುತ್ತಿವೆ ಎಂದು ನೇಪಾಳದಲ್ಲಿರುವ ಭಾರತೀಯ ರಾಯಭಾರಿ ಬಿ.ಕೆ.ರೆಗ್ಮಿಯವರು ಹೇಳಿದ್ದಾರೆ.
ಸಿಮಿಕೋಟ್'ಗೆ 2 ವಿಮಾನಗಳು ಆಗಮಿಸಿದ್ದು, ಸಂಕಷ್ಟದಲ್ಲಿರುವ 525 ಯಾತ್ರಾರ್ಥಿಗಳನ್ನು ರಕ್ಷಣೆ ಮಾಡುತ್ತಿವೆ ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Twitterಟ್ವಿಟರ್rescueರಕ್ಷಣೆNepalನೇಪಾಳIndian pilgrimsKailash Mansarovar Yatraಕೈಲಾಸ ಮಾನಸ ಸರೋವರ ಯಾತ್ರೆNepal Armyನೇಪಾಳ ಸೇನೆಭಾರತೀಯ ಯಾತ್ರಿಕರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


