'ರೋಡ್ ಟು ನಯಾ ಪಾಕಿಸ್ತಾನ', ಭಾರತಕ್ಕೆ ಆಹ್ವಾನ ನೀಡುತ್ತೇನೆ; ಪ್ರಣಾಳಿಕೆಯಲ್ಲಿ ಇಮ್ರಾನ್ ಖಾನ್
ಪಾಕಿಸ್ತಾನ ರಾಷ್ಟ್ರಕ್ಕೆ ಹೊಸ ವರ್ಚಸ್ಸು ನೀಡುವ ಸಂಕಲ್ಪವನ್ನು ಹೊಂದಿ ರೋಡ್ ಟು ನಯಾ ಪಾಕಿಸ್ತಾನ ಎಂಬ ಶೀರ್ಷಿಕೆಯನ್ನು ಹೊಂದಿರುವ ಚುನಾವಣಾ ಪ್ರಣಾಳಿಕೆಯನ್ನು ರಾಜಕಾರಣಿಯಾಗಿ ಪರಿವರ್ತಿತರಾಗಿರುವ ಇಮ್ರಾನ್ ಖಾನ್ ಅವರು ಸೋಮವಾರ ಬಿಡುಗಡೆ ಮಾಡಿದ್ದಾರೆ...

Published On :
ಇಸ್ಲಾಮಾಬಾದ್; ಪಾಕಿಸ್ತಾನ ರಾಷ್ಟ್ರಕ್ಕೆ ಹೊಸ ವರ್ಚಸ್ಸು ನೀಡುವ ಸಂಕಲ್ಪವನ್ನು ಹೊಂದಿ ರೋಡ್ ಟು ನಯಾ ಪಾಕಿಸ್ತಾನ ಎಂಬ ಶೀರ್ಷಿಕೆಯನ್ನು ಹೊಂದಿರುವ ಚುನಾವಣಾ ಪ್ರಣಾಳಿಕೆಯನ್ನು ರಾಜಕಾರಣಿಯಾಗಿ ಪರಿವರ್ತಿತರಾಗಿರುವ ಇಮ್ರಾನ್ ಖಾನ್ ಅವರು ಸೋಮವಾರ ಬಿಡುಗಡೆ ಮಾಡಿದ್ದಾರೆ.
ಈ ಕುರಿತು ಪಾಕಿಸ್ತಾನದ ಡಾನ್ ನ್ಯೂಸ್ ವರದಿ ಮಾಡಿದೆ. ಜುಲೈ. 25 ರಂದು ಪಾಕಿಸ್ತಾನದಲ್ಲಿ ಮಹಾ ಚುನಾವಣೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಇಮ್ರಾನ್ ಖಾನ್ ಅವರು ತಮ್ಮ ಪಕ್ಷದ ತೆಹರೀಕ್-ಇ-ಇನ್ಸಾಫ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಪ್ರಣಾಳಿಕೆ ಬಿಡುಗಡೆ ವೇಳೆ ತಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದರೆ, ವ್ಯೂಹಾತ್ಮಕ ಚರ್ಚೆಗಾಗಿ ಭಾರತವನ್ನು ಆಹ್ವಾನಿಸುತ್ತೇನೆಂದು ಇಮ್ರಾನ್ ಖಾನ್ ಹೇಳಿದ್ದಾರೆ. ಅಲ್ಲದೆ, ಶಸ್ತ್ರಾಸ್ತ್ರಗಳು ಹಾಗೂ ಯುದ್ಧ ಸಾಮಾಗ್ರಿಗಳ ನಿಗ್ರಹಿಸುವುದ ಪಕ್ಷದ ಗುರಿ ಎಂದು ಹೇಳಿಕೊಂಡಿದ್ದಾರೆ.
ಪ್ರಣಾಳಿಕೆಯು ಪಾಕಿಸ್ತಾನವನ್ನು ಇಸ್ಲಾಮಿಕ್ ವೆಲ್ ಫೇಟ್ ಸ್ಟೇಟ್ ಆಗಿ ರೂಪಾಂತರಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ. ದೇಶದಲ್ಲಿ ಭ್ರಷ್ಟಾಚಾರವನ್ನು ಹೋಗಲಾಡಿಸಲು ನ್ಯಾಷನಲ್ ಅಕೌಂಟೆಬಿಲಿಟಿ ಬ್ಯೂರೋವನ್ನು ಸ್ವಾಯತ್ತಗೊಳಿಸಲಾಗುತ್ತದೆ. ಈ ಬ್ಯೂರೋ ಎಲ್ಲಾ ಬಗೆಯ ಭ್ರಷ್ಟಾಚಾರ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


