ವಿದೇಶ

ಬಲೊಚಿಸ್ತಾನ್ ನಲ್ಲಿ ಆತ್ಮಹತ್ಯಾ ಬಾಂಬರ್ ದಾಳಿ: ಮೃತರ ಸಂಖ್ಯೆ 130ಕ್ಕೆ ಏರಿಕೆ

ಬಲೂಚಿಸ್ತಾನ್ ನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಆತ್ಮಹತ್ಯಾ ಬಾಂಬರ್ ದಾಳಿಯಿಂದ ಮೃತಪಟ್ಟವರ ಸಂಖ್ಯೆ 130ಕ್ಕೆ ಏರಿಕೆ ಆಗಿದೆ.

ಬಲೊಚಿಸ್ತಾನ್ ನಲ್ಲಿ  ಆತ್ಮಹತ್ಯಾ ಬಾಂಬರ್ ದಾಳಿ: ಮೃತರ ಸಂಖ್ಯೆ 130ಕ್ಕೆ ಏರಿಕೆ
ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುತ್ತಿರುವ ಪೊಲೀಸರು
Published On :
ಪಾಕಿಸ್ತಾನ: ಬಲೂಚಿಸ್ತಾನ್ ನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಆತ್ಮಹತ್ಯಾ ಬಾಂಬರ್ ದಾಳಿಯಿಂದ ಮೃತಪಟ್ಟವರ ಸಂಖ್ಯೆ 130ಕ್ಕೆ ಏರಿಕೆ ಆಗಿದೆ.
ದಾಳಿಯಿಂದಾಗಿ 200 ಜನರು ಗಾಯಗೊಂಡಿದ್ದಾರೆ. ಈ ಪೈಕಿ 20 ಜನರ ಸ್ಥಿತಿ ಗಂಭೀರವಾಗಿದೆ ಎಂದು ದಿ ಎಕ್ಸ್ ಪ್ರೆಸ್ ಟ್ರಿಬ್ಯೂನಲ್ ವರದಿ ಮಾಡಿದೆ.

ಬಲೊಚಿಸ್ತಾನದಲ್ಲಿ ಅವಾಮಿ ಪಕ್ಷದ ನಾಯಕ ಸಿರಾಜ್ ರೈಸಾನಿ ಪಾಲ್ಗೊಂಡಿದ್ದ ಚುನಾವಣಾ ಪ್ರಚಾರ ಸಮಾವೇಶವನ್ನು ಗುರಿಯಾಗಿಟ್ಟುಕೊಂಡು ನಡೆದ ಆತ್ಮಹತ್ಯಾ ಬಾಂಬರ್ ದಾಳಿಯಲ್ಲಿ ಕನಿಷ್ಠ 128 ಮಂದಿ ಸಾವನ್ನಪ್ಪಿದ್ದು, 200 ಮಂದಿ ಗಾಯಗೊಂಡಿದ್ದಾರೆ.

ಈ ಘಟನೆಯಿಂದಾಗಿ ಬಲೋಚಿಸ್ತಾನ್ ನಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹಲವು ಕಡೆಗಳಲ್ಲಿ ವ್ಯಾಪಾರ- ವಾಣಿಜ್ಯ ರದ್ದುಗೊಂಡಿದೆ. ಈ ಪ್ರದೇಶಾದ್ಯಂತ ಹೈ ಆಲರ್ಟ್ ಘೋಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.