ತಾವು ಲೂಟಿ ಮಾಡಿರುವ ಹಣವನ್ನು ನವಾಜ್ ಷರೀಫ್ ವಾಪಸ್ ಮಾಡಬೇಕು: ಇಮ್ರಾನ್ ಖಾನ್
ಪಾಕಿಸ್ತಾನ ಮಾಜಿ ಪ್ರಧಾನಿ ನವಜಾ ಷರೀಫ್ 300 ಬಿಲಿಯನ್ ರು ಹಣವನ್ನು ಲೂಟಿ ಮಾಡಿದ್ದಾರೆ, ಅದನ್ನು ವಾಪಸ್ ನೀಡಬೇಕು ಎಂದು ಪಾಕಿಸ್ತಾನ್ ತೆಹ್ರಿಕ್ ...

Published On :
ಇಸ್ಲಾಮಾಬಾದ್: ಪಾಕಿಸ್ತಾನ ಮಾಜಿ ಪ್ರಧಾನಿ ನವಜಾ ಷರೀಫ್ 300 ಬಿಲಿಯನ್ ರು ಹಣವನ್ನು ಲೂಟಿ ಮಾಡಿದ್ದಾರೆ, ಅದನ್ನು ವಾಪಸ್ ನೀಡಬೇಕು ಎಂದು ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್ ಮುಖ್ಯಸ್ಥ ಇಮ್ರಾನ್ ಖಾನ್ ಹೇಳಿದ್ದಾರೆ.
ಕರಾಚಿ ಕಂಪನಿಯಲ್ಲಿ ಕೆಲಸಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಜುಲೈ 25 ಕ್ಕೆ ಪಾಕಿಸ್ತಾನ ಬದಲಾವಣೆಯಾಗುತ್ತದೆ ಎಂದು ಹೇಳಿರುವ ಅವರು ಭ್ರಷ್ಟಾಚಾರದ ಉಗುರು ಮತ್ತು ಹಲ್ಲುಗಳನ್ನು ಬುಡ ಸಮೇತ ಕಿತ್ತು ಹಾಕುವ ಭರವಸೆ ನೀಡಿದ್ದಾರೆ.
ತೆರಿಗೆ ಕಳ್ಳರನ್ನು ಎನ್ ಎ ಬಿ ಮತ್ತು ಎಫ್ ಐಎ ತನಿಖಾ ಸಂಸ್ಥೆಗಳ ವಶಕ್ಕೆ ನೀಡಲಾಗುವುದು ಎಂದು ಹೇಳಿದ್ದಾರೆ. ದೇಶದ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


