ಕೆನಡಾದಲ್ಲಿ ಭಾರತೀಯ ಮೂಲದ ಯುವಕನ ಗುಂಡಿಟ್ಟು ಹತ್ಯೆ, ಇಬ್ಬರ ಬಂಧನ
ಭಾರತೀಯ ಮೂಲದ ಯುವಕನೊಬ್ಬನನ್ನು ಆತನ ಮನೆಯಲ್ಲಿಯೇ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಕೆನಡಾದ ಬ್ರ್ಯಾಂಪ್ಟನ್ನಗರದಲ್ಲಿ ನಡೆದಿದೆ.

Published On :
ಟೊರೆಂಟೋ(ಕೆನಡಾ): ಭಾರತೀಯ ಮೂಲದ ಯುವಕನೊಬ್ಬನನ್ನು ಆತನ ಮನೆಯಲ್ಲಿಯೇ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಕೆನಡಾದ ಬ್ರ್ಯಾಂಪ್ಟನ್ನಗರದಲ್ಲಿ ನಡೆದಿದೆ.
ಮಂಗಳವಾರ ನಡೆದ ಘಟನೆಯಲ್ಲಿ ಪಲ್ವಿಂದರ್ ಸಿಂಗ್ (27) ಸಾವನ್ನಪ್ಪಿದ್ದು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಮಿಸ್ಸಿಸಾಗಾದ ಯುವಕರು ತಾವು ಸಿಂಗ್ ಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾಗಿ ಪೋಲೀಸರೆದುರು ಹೇಳಿಕೆ ನಿಡಿ ಶರಣಾಗಿದ್ದಾರೆ.ಇಬ್ಬರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಗಂಭೀರ ತನಿಖೆ ಕೈಗೊಂಡಿದ್ದಾರೆ.
ಪಲ್ವಿಂದರ್ ಸಿಂಗ್ ಮೂಲತಃ ಪಂಜಾಬಿನವರಾಗಿದ್ದು ಟ್ರಕ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. 2009 ರಲ್ಲಿ ಅವರು ಕೆನಡಾಗೆ ತೆರಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


