ಪಾಕಿಸ್ತಾನ ಚುನಾವಣೆ: ಲಷ್ಕರ್ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಗಳ ಸ್ಪರ್ಧೆ ಬಗ್ಗೆ ಅಮೆರಿಕ ಆತಂಕ
ಪಾಕಿಸ್ತಾನದಲ್ಲಿ ಜು.25 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಲಷ್ಕರ್ ಉಗ್ರ ಸಂಘಟನೆಗಳಿಗೆ ಸೇರಿದ ವ್ಯಕ್ತಿಗಳು ಸ್ಪರ್ಧಿಸುತ್ತಿರುವುದರ ಬಗ್ಗೆ ಅಮೆರಿಕ ಆತಂಕ ವ್ಯಕ್ತಪಡಿಸಿದೆ ಎಂದು ಮಾಧ್ಯಮ ವರದಿ

Published On :
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಜು.25 ರಂದು ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಲಷ್ಕರ್ ಉಗ್ರ ಸಂಘಟನೆಗಳಿಗೆ ಸೇರಿದ ವ್ಯಕ್ತಿಗಳು ಸ್ಪರ್ಧಿಸುತ್ತಿರುವುದರ ಬಗ್ಗೆ ಅಮೆರಿಕ ಆತಂಕ ವ್ಯಕ್ತಪಡಿಸಿದೆ ಎಂದು ಮಾಧ್ಯಮ ವರದಿ ಪ್ರಕಟವಾಗಿದೆ.
ಲಷ್ಕರ್ ಉಗ್ರ ಸಂಘಟನೆಗಳಿಗೆ ಸೇರಿದ ವ್ಯಕ್ತಿಗಳು ಚುನಾವಣೆಗೆ ಸ್ಪರ್ಧಿಸುತ್ತಿರುವುದರ ಬಗ್ಗೆ ಪಾಕಿಸ್ತಾನಕ್ಕೂ ಎಚ್ಚರಿಕೆ ನೀಡಿರುವ ಅಮೆರಿಕ, "ಲಷ್ಕರ್ ಉಗ್ರ ಸಂಘಟನೆ ಬಗ್ಗೆ ನಾವು ನಮ್ಮ ಆತಂಕವನ್ನು ಪಾಕಿಸ್ತಾನ ಸರ್ಕಾರಕ್ಕೆ ನಿರಂತರವಾಗಿ ಹೇಳುತ್ತಿದ್ದೇವೆ, ಈಗ ಲಷ್ಕರ್ ಸಂಘಟನೆಗೆ ಸೇರಿದ ಉಗ್ರ ಸಂಘಟನೆಗಳು ಚುನಾವಣೆಗೆ ಸ್ಪರ್ಧಿಸುತ್ತಿರುವುದರ ಬಗ್ಗೆಯೂ ಎಚ್ಚರಿಕೆ ನೀಡಿದ್ದೇವೆ ಎಂದು ಅಮೆರಿಕದ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಪಾಕಿಸ್ತಾನದ ರಾಜಕಾರಣಿಗಳ ಮೇಲೆ ಭಯೋತ್ಪಾದಕ ದಾಳಿ ನಡೆದರೂ ಸಹ ಚುನಾವಣೆಯನ್ನು ಮುಂದುವರೆಸುವ ಅಗತ್ಯವಿದೆ ಎಂದು ಅಮೆರಿಕದ
ಸರ್ಕಾರ ಹೇಳಿತ್ತು. ಇದೇ ವೇಳೆ ಯುರೋಪಿಯನ್ ಯೂನಿಯನ್ ಸಹ ಪಾಕಿಸ್ತಾನದಲ್ಲಿ ಶಾಂತಿಯುತ ಚುನಾವಣೆ ನಡೆಯಬೇಕು ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


