ಅಫ್ಘಾನಿಸ್ತಾನ : ಕಾಬೂಲ್ ವಿಮಾನ ನಿಲ್ದಾಣದಲ್ಲಿ ಆತ್ಮಹತ್ಯಾ ದಾಳಿ : 14 ಸಾವು, 60 ಮಂದಿ ಗಾಯ
ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಪಾಧ್ಯಕ್ಷ ಅಬ್ದುಲ್ ರಶೀದ್ ದೋಸ್ತಮ್ ಆಗಮನದ ನಂತರ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿದ್ದು, ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಾಬೂಲ್ : ಐಸಿಸ್ ಉಗ್ರರು ಅಫ್ಘಾನಿಸ್ತಾನದಲ್ಲಿ ಅಟ್ಟಹಾಸ ಮೆರೆದಿದ್ದಾರೆ. ರಾಜಧಾನಿ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಪಾಧ್ಯಕ್ಷ ಅಬ್ದುಲ್ ರಶೀದ್ ದೋಸ್ತಮ್ ಆಗಮನದ ನಂತರ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿದ್ದು, ಘಟನೆಯಲ್ಲಿ 14 ಮಂದಿ ಮೃತಪಟ್ಟಿದ್ದು, 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಬ್ದುಲ್ ರಶೀದ್ ದೋಸ್ತಮ್ ಸ್ವಾಗತಿಸಲು ಸರ್ಕಾರದ ಹಿರಿಯ ಅಧಿಕಾರಿಗಳು, ರಾಜಕೀಯ ನಾಯಕರು ಮತ್ತು ಅವರ ಬೆಂಬಲಿಗರು ಆಗಮಿಸಿದ್ದರು. ಈ ಸಂದರ್ಭದಲ್ಲಿ ದಾಳಿ ನಡೆದಿದೆ. ಮೊದಲ ಬಾರಿಗೆ ಇಂತಹ ದಾಳಿ ನೋಡುತ್ತಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಚೆಲ್ಲಾಪಿಲ್ಲಿಯಾಗಿ ಬಿದಿದ್ದ ಮನುಷ್ಯರ ಮಾಂಸಗಳನ್ನು ಕೆಲವರು ಸಂಗ್ರಹಿಸುತ್ತಿದ್ದರು. ಅಫ್ಘಾನಿಸ್ತಾನದಲ್ಲಿ ಏನು ನಡೆಯುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ಪಾಶ್ಚಾತ್ಯ ಸೂಟ್ ಮತ್ತು ಶಸ್ತ್ರಸಜ್ಜಿತ ವಾಹನದಲ್ಲಿ ಪ್ರಯಾಣಿಸುತ್ತಿದ್ದ ದೋಸ್ತಮ್ ಅವರಿಗೆ ಯಾವುದೇ ರೀತಿಯ ಗಾಯವಾಗಿಲ್ಲ ಎಂದು ವಕ್ತಾರ ಬಾಷಿರ್ ಅಹ್ಮದ್ ತಯಾಂಜ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


