ಇತಿಹಾಸ ನಮ್ಮೊಂದಿಗಿದೆ, ಇಮ್ರಾನ್ ಖಾನ್ ಅವರೇ ಮುಂದಿನ ಪ್ರಧಾನಿ: ಪಿಟಿಐ ಟ್ವೀಟ್
ಪಾಕಿಸ್ತಾನ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ ಪಕ್ಷ, ಇತಿಹಾಸ ನಮ್ಮೊಂದಿಗಿದ್ದು, ಇಮ್ರಾನ್ ಖಾನ್ ಅವರೇ ಮುಂದಿನ ಪಾಕಿಸ್ತಾನ ಪ್ರಧಾನಿ ಎಂದು ಟ್ವೀಟ್ ಮಾಡಿದೆ.

Published On :
ಇಸ್ಲಾಮಾಬಾದ್: ಪಾಕಿಸ್ತಾನ ಸಾರ್ವತ್ರಿಕ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಪಾಕಿಸ್ತಾನ್ ತೆಹ್ರೀಕ್ ಇನ್ಸಾಫ್ ಪಕ್ಷ, ಇತಿಹಾಸ ನಮ್ಮೊಂದಿಗಿದ್ದು, ಇಮ್ರಾನ್ ಖಾನ್ ಅವರೇ ಮುಂದಿನ ಪಾಕಿಸ್ತಾನ ಪ್ರಧಾನಿ ಎಂದು ಟ್ವೀಟ್ ಮಾಡಿದೆ.
ನಿನ್ನೆ ನಡೆದ ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, ಒಟ್ಟು 272 ಕ್ಷೇತ್ರಗಳ ಪೈಕಿ 122 ಕ್ಷೇತ್ರಗಳಲ್ಲಿ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷ ಮುನ್ನಡೆ ಸಾಧಿಸಿದೆ. ಈಗಾಗಲೇ ಪಿಟಿಐ ಪಕ್ಷದ ಕಾರ್ಯಕರ್ತರು ಬೀದಿಗಿಳಿದು ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಇನ್ನು ಪಿಐಟಿ ಪಕ್ಷ ವಕ್ತಾರರಾದ ಶಾಹಿದಾ ಅಲಿ ಅವರು ಸಂಭ್ರಮಾಚರಣೆ ವೇಳೆಯಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾನು ಈಗ ಹೊಸ ಪಾಕಿಸ್ತಾನವನ್ನು ಕಂಡುಕೊಂಡಿದ್ದೇವೆ. ಇಮ್ರಾನ್ ಖಾನ್ ಅವರ ನೇತೃತ್ವದಲ್ಲಿ ಖಂಡಿತಾ ನಾವು ಹೊಸದೊಂದು ಮಾರ್ಗದಲ್ಲಿ ಚಲಿಸಲಿದ್ದೇವೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಇಮ್ರಾನ್ ಖಾನ್ಇಸ್ಲಾಮಾಬಾದ್Imran KhanIslamabadPTIಪಿಟಿಐPakistan Election 2018ಪಾಕಿಸ್ತಾನ ಸಾರ್ವತ್ರಿಕ ಚುನಾವಣಾ ಫಲಿತಾಂಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


