ಬ್ರಿಕ್ಸ್ ಶೃಂಗಸಭೆ: ಶಿಕ್ಷಣ ಸೇರಿ ಹಲವು ಮಹತ್ವದ ಒಪ್ಪಂದಗಳಿಗೆ ಭಾರತ-ದಕ್ಷಿಣ ಆಫ್ರಿಕಾ ಸಹಿ
ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೊಸಾ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಉಭಯ ದೇಶಗಳು ಶಿಕ್ಷಣ ಸೇರಿದಂತೆ ನಾಲ್ಕು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿವೆ.

Published On :
ಜೋಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೊಸಾ ಅವರನ್ನು ಭೇಟಿ ಮಾಡಿದ್ದು, ಈ ವೇಳೆ ಉಭಯ ದೇಶಗಳು ಶಿಕ್ಷಣ ಸೇರಿದಂತೆ ನಾಲ್ಕು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿವೆ.
ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದಕ್ಷಿಣ ಆಫ್ರಿಕಾಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಅಧ್ಯಕ್ಷ ಸಿರಿಲ್ ರಾಮಾಫೊಸಾ ಆತ್ಮೀಯವಾಗಿ ಬರಮಾಡಿಕೊಂಡರು. ಜೋಹಾನ್ಸ್ ಬರ್ಗ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಖುದ್ದು ಅಧ್ಯಕ್ಷ ಸಿರಿಲ್ ರಾಮಾಫೊಸಾ ವಿಮಾನ ನಿಲ್ದಾಣಕ್ಕೇ ಆಗಮಿಸಿ ಸ್ವಾಗತ ಕೋರಿದರು.
ಬಳಿಕ ಶೃಂಗಸಭೆ ಆಯೋಜನೆಯಾಗಿರುವ ಖಾಸಗಿ ಹೊಟೆಲ್ ಗೆ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಸಿರಿಲ್ ರಾಮಾಫೊಸಾ ತೆರಳಿದರು. ಈ ವೇಳೆ ಉಭಯ ದೇಶಗಳ ಮುಖಂಡರು ಮತ್ತು ಅಧಿಕಾರಿಗಳು ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ಶಿಕ್ಷಣ, ಕೌಶಲ್ಯ ತರಬೇತಿ, ಆರೋಗ್ಯ ಮತ್ತು ಕೃಷಿ ಕ್ಷೇತ್ರಗಳಿಗೆ ಸಂಬಂಧಿಸಿದ ಒಪ್ಪಂದಗಳಿಗೆ ಉಭಯ ನಾಯಕರು ಸಹಿಹಾಕಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆಯಿಂದ ಆರಂಭವಾಗಿರುವ 3 ದಿನಗಳ 10ನೇ ಬ್ರಿಕ್ಸ್ ಶೃಂಗಸಭೆ 'ನಾಲ್ಕನೇ ಕೈಗಾರಿಕಾ ಕ್ರಾಂತಿಯಲ್ಲಿ ಅಂತರ್ಗತ ಬೆಳವಣಿಗೆ ಮತ್ತು ಹಂಚಿಕೆಯ ಸಮೃದ್ಧಿಗಾಗಿ ಸಹಯೋಗ' ಪರಿಕಲ್ಪನೆಯಡಿಯಲ್ಲಿ ನಡೆಯುತ್ತಿದೆ. ಇನ್ನು ಶೃಂಗಸಭೆಯಲ್ಲಿ ಭಾರತ, ರಷ್ಯಾ, ಚೀನಾ, ಅರ್ಜೆಂಟೀನಾ, ದಕ್ಷಿಣ ಆಫ್ರಿಕಾ, ಬ್ರೆಜಿಲ್ ದೇಶಗಳ ನಾಯಕರು ಪಾಲ್ಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPM Modiಪ್ರಧಾನಿ ಮೋದಿದಕ್ಷಿಣ ಆಫ್ರಿಕಾSouth AfricaJohannesburgಜೋಹಾನ್ಸ್ ಬರ್ಗ್ಬ್ರಿಕ್ಸ್ ಸಮಾವೇಶBRICSSummit
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


