ವಿದೇಶ

ವಿಶ್ವಸಂಸ್ಥೆಗೆ ಆರ್ಥಿಕ ಬಿಕ್ಕಟ್ಟು, ಹಣ ಪಾವತಿಸುವಂತೆ ಸದಸ್ಯ ರಾಷ್ಟ್ರಗಳಿಗೆ ಒತ್ತಾಯ

ವಿಶ್ವಸಂಸ್ಥೆಗೆ ಹಣಕಾಸಿನ ಬಿಕ್ಕಟ್ಟು ಎದುರಾಗಿದ್ದು, ಅಂತರಾಷ್ಟ್ರೀಯ ಸಂಸ್ಥೆಗೆ ಹಣ ಪಾವತಿಸುವಂತೆ ವಿಶ್ವಸಂಸ್ಥೆಯ...

ವಿಶ್ವಸಂಸ್ಥೆಗೆ ಆರ್ಥಿಕ ಬಿಕ್ಕಟ್ಟು, ಹಣ ಪಾವತಿಸುವಂತೆ ಸದಸ್ಯ ರಾಷ್ಟ್ರಗಳಿಗೆ ಒತ್ತಾಯ
ಅಂಟೊನಿಯೊ ಗುಟೆರಸ್‌
Published On :
ಜೆನಿವಾ: ವಿಶ್ವಸಂಸ್ಥೆಗೆ ಹಣಕಾಸಿನ ಬಿಕ್ಕಟ್ಟು ಎದುರಾಗಿದ್ದು, ಅಂತರಾಷ್ಟ್ರೀಯ ಸಂಸ್ಥೆಗೆ ಹಣ ಪಾವತಿಸುವಂತೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಅಂಟೊನಿಯೊ ಗುಟೆರಸ್‌ ಅವರು ಸದಸ್ಯ ರಾಷ್ಟ್ರಗಳಿಗೆ ಮನವಿ ಮಾಡಿದ್ದಾರೆ.
ಸದಸ್ಯ ರಾಷ್ಟ್ರಗಳು ಹಣಪಾವತಿಸಲು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕೂಡಲೇ ಹಣ ಪಾವತಿಸುವಂತೆ ಗುಟೆರಸ್ ಅವರು ಸದಸ್ಯ ರಾಷ್ಟ್ರಗಳಿಗೆ ಪತ್ರ ಬರೆದಿರುವುದಾಗಿ ಫಾಕ್ಸ್ ನ್ಯೂಸ್ ವರದಿ ಮಾಡಿದೆ.
ಕ್ಯಾಲೆಂಡರ್ ವರ್ಷದಲ್ಲಿ ನಮ್ಮ ಖಜಾನೆಯಲ್ಲಿನ ಹಣ ಯಾವತ್ತೂ ಇಷ್ಟೊಂದು ಕಡಿಮೆಯಾಗಿರಲಿಲ್ಲ. ಶೀಘ್ರದಲ್ಲೇ ಖಜಾನೆ ಖಾಲಿಯಾಗಲಿದೆ ಎಂದು ಗುಟೆರಸ್ ಪತ್ರದಲ್ಲಿ ಹೇಳಿರುವುದಾಗಿ ಫಾಕ್ಸ್ ನ್ಯೂಸ್ ತಿಳಿಸಿದೆ.
ಇದೇ ವೇಳೆ ಗುಟೆರಸ್ ಅವರು ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಹಾಗೂ ವಿಶ್ವಸಂಸ್ಥೆಯ ಆರ್ಥಿಕ ಸ್ಥಿತಿ ಸುಧಾರಿಸಲು ಕೆಲ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.