ವಿದೇಶ

ಪಾಕಿಸ್ತಾನ ಪ್ರಧಾನಿಯಾಗಿ ಇಮ್ರಾನ್ ಖಾನ್ ಆಗಸ್ಟ್ 11ರಂದು ಅಧಿಕಾರ ಸ್ವೀಕಾರ

ಪಾಕಿಸ್ತಾನದ ಪ್ರಧಾನ ಮಂತ್ರಿಯಾಗಿ ಆಗಸ್ಟ್ 11ರಂದು ಪ್ರಮಾಣವಚನ ಸ್ವೀಕರಿಸುವುದಾಗಿ ಇಮ್ರಾನ್ ...

ಪಾಕಿಸ್ತಾನ ಪ್ರಧಾನಿಯಾಗಿ ಇಮ್ರಾನ್ ಖಾನ್ ಆಗಸ್ಟ್ 11ರಂದು ಅಧಿಕಾರ ಸ್ವೀಕಾರ
ಇಮ್ರಾನ್ ಖಾನ್
Published On :

ಇಸ್ಲಮಾಬಾದ್: ಪಾಕಿಸ್ತಾನದ ಪ್ರಧಾನ ಮಂತ್ರಿಯಾಗಿ ಆಗಸ್ಟ್ 11ರಂದು ಪ್ರಮಾಣವಚನ ಸ್ವೀಕರಿಸುವುದಾಗಿ ಇಮ್ರಾನ್ ಖಾನ್ ಹೇಳಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

65ರ ಹರೆಯದ ಪಾಕಿಸ್ತಾನ ಟೆಹ್ರೀಕ್-ಇ-ಇನ್ಸಾಫ್ ಕಳೆದ 25ರಂದು ನಡೆದ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೂ ಪೂರ್ಣಪ್ರಮಾಣದಲ್ಲಿ ಸರ್ಕಾರ ರಚಿಸಲು ಬೇಕಾಗುವಷ್ಟು ಸ್ಥಾನಗಳ ಬಲ ಅದರ ಬಳಿಯಿಲ್ಲ.

ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳ ಬೆಂಬಲ ಪಡೆದುಕೊಂಡು ಸರ್ಕಾರ ರಚಿಸುತ್ತೇವೆ. ಮುಂದಿನ ಆಗಸ್ಟ್ 11ರಂದು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ಪಾಕಿಸ್ತಾನ ರೇಡಿಯೊ ವರದಿ ಮಾಡಿದೆ.

ಕೈಬರ್ ಪಕ್ತುಂಖ್ವಾ ಪ್ರಾಂತ್ಯ ವಿಧಾನಸಭೆ ಫಲಿತಾಂಶ ಮುಂದಿನ 48 ಗಂಟೆಗಳಲ್ಲಿ ಪ್ರಕಟವಾಗಲಿದ್ದು, ಅಲ್ಲಿಗೆ ಮುಖ್ಯಮಂತ್ರಿಯನ್ನು ಕೂಡ ನಿರ್ಧರಿಸಿದ್ದೇನೆ. ಜನರ ಹಿತಾಸಕ್ತಿ ದೃಷ್ಟಿಯಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಪಿಟಿಐ ಸದಸ್ಯರನ್ನುದ್ದೇಶಿಸಿ ಇಮ್ರಾನ್ ಖಾನ್ ಹೇಳಿದರು.

ಇದಕ್ಕೂ ಮುನ್ನ ಅವರು ಆಗಸ್ಟ್ 14ರಂದು ಪ್ರಧಾನಿಯಾಗಿ ಅಧಿಕಾರ ವಹಿಸುತ್ತಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.