ಕಾಬೂಲ್: ಧಾರ್ಮಿಕ ಕಾರ್ಯಕ್ರಮದ ವೇಳೆ ಆತ್ಮಾಹುತಿ ಬಾಂಬ್ ದಾಳಿ, 14 ಸಾವು
ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ...

Published On :
ಕಾಬೂಲ್: ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಭಯೋತ್ಪಾದಕರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 14 ಮಂದಿ ಮೃತಪಟ್ಟಿದ್ದಾರೆ.
ಪಾಲಿಟೆಕ್ನಿಕ್ ವಿಶ್ವವಿದ್ಯಾಲಯದ ಸಮೀಪ ಈ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು. ಬಾಂಬ್ ದಾಳಿಯಲ್ಲಿ 14 ಮಂದಿ ಸಾವನ್ನಪ್ಪಿದ್ದು 19ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಆಫ್ಘಾನ್ ಒಳಾಡಳಿತ ಸಚಿವಾಲಯ ವಕ್ತಾರ ನಜೀಬ್ ಡ್ಯಾನಿಷ್, ಮುಸ್ಲಿಂ ಧರ್ಮಗುರುಗಳು, ವಿದ್ವಾಂಸರು ಗಾಯಗೊಂಡಿದ್ದಾರೆ.
ಆಫ್ಘಾನಿಸ್ತಾನದಲ್ಲಿ ನಿರಂತರವಾಗಿ ನಡೆಯುತ್ತಿರುವ ಉಗ್ರರ ಆತ್ಮಾಹುತಿ ಬಾಂಬ್ ದಾಳಿಗಳ ವಿರುದ್ಧ ಫತ್ವಾ ಹೊರಡಿಸಲು ಮುಸ್ಲಿಂ ಧರ್ಮಗುರುಗಳು ಸಭೆ ಸೇರಿದ್ದರು ಎಂದು ವರದಿಯಾಗಿದೆ.
ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿರುವುದರಿಂದ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
terroristಆಫ್ಘಾನಿಸ್ತಾನಭಯೋತ್ಪಾದಕರುKabulಕಾಬೂಲ್suicide bombMuslim Clericsಮುಸ್ಲಿಂ ಧರ್ಮಗುರುಆತ್ಮಾಹುತಿ ಬಾಂಬ್ ದಾಳಿAfghanista
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


