ಚೀನಾದ ಕ್ವಿಂಗ್ಡಾವೊದಲ್ಲಿ ಎಸ್ ಸಿ ಓ ಶೃಂಗಸಭೆ: ಪ್ರಧಾನಿ ನರೇಂದ್ರ ಮೋದಿ ಆಗಮನ
ಎರಡು ದಿನಗಳ 18 ನೇ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರಮೋದಿ ಇಂದು ಚೀನಾದ ಕ್ವಿಂಗ್ಡಾವೊಗೆ ಆಗಮಿಸಿದ್ದಾರೆ.

ಕ್ವಿಂಗ್ಡಾವೊ: ಎರಡು ದಿನಗಳ 18 ನೇ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಚೀನಾದ ಕ್ವಿಂಗ್ಡಾವೊಗೆ ಆಗಮಿಸಿದ್ದಾರೆ.
ಶೃಂಗಸಭೆಯ ಭಾಗವಾಗಿ ನರೇಂದ್ರ ಮೋದಿ ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಬಾಂಧವ್ಯ ವೃದ್ದಿ ಕುರಿತಂತೆ ಮಾತುಕತೆ ನಡೆಸಲಿದ್ದಾರೆ. ವುಹಾನ್ ನಲ್ಲಿ ಕಳೆದ ತಿಂಗಳ ನಡೆದ ಅನೌಪಚಾರಿಕ ಸಭೆಯಲ್ಲಿ ತೆಗೆದುಕೊಂಡು ನಿರ್ಧಾರಗಳ ಅನುಷ್ಠಾನದ ಬಗ್ಗೆಯೂ ಚರ್ಚಿಸಲಿದ್ದಾರೆ.
ಭಯೋತ್ಪಾದನೆ ನಿಯಂತ್ರಣ, ಪ್ರಾದೇಶಿಕ ಮಟ್ಟದಲ್ಲಿ ವ್ಯಾಪಾರ ಮತ್ತು ಹೂಡಿಕೆಯಲ್ಲಿ ಪ್ರಗತಿ ಸೇರಿದಂತೆ ವಿಶ್ವವೂ ಎದುರಿಸುತ್ತಿರುವ ಪ್ರಮುಖ ಸವಾಲುಗಳನ್ನು ನಿಭಾಯಿಸುವಲ್ಲಿ ಭಾರತ ವಹಿಸುತ್ತಿರುವ ಪಾತ್ರದ ಬಗ್ಗೆ ಎಸ್ ಸಿ ಒ ಶೃಂಗಸಭೆಯಲ್ಲಿ ನರೇಂದ್ರ ಮೋದಿ ಮಾತನಾಡುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


