ವಿದೇಶ

ಪ್ರಧಾನಿ ಮೋದಿ ನೇತೃತ್ವದ ಭಾರತ ಜಗತ್ತಿಗೆ ಸ್ಫೂರ್ತಿ ಅಂದ ವಿಶ್ವಸಂಸ್ಥೆ ಮುಖ್ಯಸ್ಥರು, ಯಾಕೆ ಗೊತ್ತಾ!

ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾದ ಬಳಿಕ ಜಾಗತಿಕ ಮಟ್ಟದಲ್ಲಿ ಭಾರತ ಪ್ರಕಾಶಿಸುತ್ತಿದ್ದು ಇದಕ್ಕೆ ಸಾಕ್ಷಿಯೆಂಬಂತೆ ಅಂತಾರಾಷ್ಟ್ರೀಯ...

ಪ್ರಧಾನಿ ಮೋದಿ ನೇತೃತ್ವದ ಭಾರತ ಜಗತ್ತಿಗೆ ಸ್ಫೂರ್ತಿ ಅಂದ ವಿಶ್ವಸಂಸ್ಥೆ ಮುಖ್ಯಸ್ಥರು, ಯಾಕೆ ಗೊತ್ತಾ!
ಮೋದಿ-ಅಂಟೋನಿಯೋ ಗುಟೆರೆಸ್
Published On :
ನ್ಯೂಯಾರ್ಕ್: ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾದ ಬಳಿಕ ಜಾಗತಿಕ ಮಟ್ಟದಲ್ಲಿ ಭಾರತ ಪ್ರಕಾಶಿಸುತ್ತಿದ್ದು ಇದಕ್ಕೆ ಸಾಕ್ಷಿಯೆಂಬಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಭಾರತವೇ ಸ್ಫೂರ್ತಿ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೋ ಗುಟೆರೆಸ್ ಶ್ಲಾಘಿಸಿದ್ದಾರೆ. 
ಪ್ರಧಾನಿ ಮೋದಿ ನಾಯಕತ್ವದ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಲಭಿಸಿದ್ದು ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ಮತ್ತು ನೋಟು ನಿಷೇಧ ಸೇರಿ ಹಲವು ವಿಷಯಗಳಲ್ಲಿ ಭಾರತವನ್ನು ಹಲವು ದೇಶಗಳು ಹಾಗೂ ಸಂಸ್ಥೆಗಳು ಹೊಗಳುತ್ತಿವೆ. 
ವಿಶ್ವಸಂಸ್ಥೆ ರಾಯಭಾರಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಗುಟೆರೆಸ್ ಭಾರತದ ನಾಯಕತ್ವ, ಅಭಿವೃದ್ಧಿಗಾಗಿ ವಿಶ್ವಸಂಸ್ಥೆ ಜತೆ ಹೊಂದಿರುವ ಸಹಭಾಗಿತ್ವ ಸೇರಿ ಹಲವು ವಿಷಯಗಳಲ್ಲಿ ಭಾರತ ಹೊಂದಿರುವ ಬದ್ಧತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಪ್ರೇರಣಾದಾಯಕ ಎಂದು ವರ್ಣಿಸಿದ್ದಾರೆ. 
ಸ್ಥಿರ ಅಭಿವೃದ್ಧಿ ಗುರಿ ಮುಟ್ಟುವಲ್ಲಿ ಭಾರತ ವಹಿಸಿದ ಪಾತ್ರ ಪ್ರಮುಖವಾದದ್ದು. ಆರಂಭದಲ್ಲಿ ಅಂದುಕೊಂಡ ಮಟ್ಟಕ್ಕೆ ಪ್ರಯತ್ನಗಳು ನಡೆಯುತ್ತಿರಲ್ಲಿಲ್ಲ. ಆದರೆ ಭಾರತ ಅಭಿವೃದ್ಧಿಗಾಗಿ ನಡೆಸುತ್ತಿರುವ ಪ್ರಯತ್ನ, ಶ್ರಮ ಹಾಗೂ ಅದರ ಮುಂದಾಲೋಚನೆಯು ಗುರಿ ಮುಟ್ಟಲು ಸ್ಪೂರ್ತಿಯಾಯಿತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.