ವಿದೇಶ

'ಅದ್ಬುತ ಯಶಸ್ಸು': ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್ ಭೇಟಿ ಬಳಿಕ ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೆ

ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ರೊಂದಿಗಿನ ಭೇಟಿ ಅದ್ಬುತ ಯಶಸ್ಸು ನೀಡುವ ವಿಶ್ವಾಸವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

'ಅದ್ಬುತ ಯಶಸ್ಸು': ಉತ್ತರ ಕೊರಿಯಾದ ಕಿಮ್ ಜಾಂಗ್ ಉನ್ ಭೇಟಿ ಬಳಿಕ ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿಕೆ
ಸಿಂಗಾಪುರದಲ್ಲಿ ಉನ್-ಟ್ರಂಪ್ ಐತಿಹಾಸಿಕ ಭೇಟಿ
Published On :
ಸಿಂಗಾಪುರ: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ರೊಂದಿಗಿನ ಭೇಟಿ ಅದ್ಬುತ ಯಶಸ್ಸು ನೀಡುವ ವಿಶ್ವಾಸವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಸಿಂಗಾಪುರದ ಸೆಂಟೋಸಾ ದ್ವೀಪದಲ್ಲಿರುವ ಕ್ಯಾಪೆಲ್ಲಾ ಹೋಟೆಲ್​ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉತ್ತರ ಕೊರಿಯಾ ಅಧ್ಯಕ್ಷ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮುಖಾಮುಖಿಯಾಗಿ ಚರ್ಚೆ ನಡೆಸಿದ್ದಾರೆ. ಚರ್ಚೆ ಕುರಿತಂತೆ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಕಿಮ್ ಜಾಂಗ್ ಉನ್ ರೊಂದಿಗಿನ ಐತಿಹಾಸಿಕ ಭೇಟಿ ಅದ್ಬುತ ಯಶಸ್ಸು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಇಡೀ ಭೇಟಿಯ ಪ್ರಮುಖ ಅಂಶ ಉತ್ತರ ಕೊರಿಯಾದ ಅಣ್ವಸ್ತ್ರ ಯೋಜನೆ ಕೈಬಿಡುವ ಕುರಿತು ಮಾರ್ಮಿಕವಾಗಿ ಮಾತನಾಡಿದ ಟ್ರಂಪ್, ಒಗ್ಗೂಡಿ ಕೆಲಸ ಮಾಡಲಿದ್ದು ಆ ಬಗ್ಗೆ ಎಚ್ಚರ ವಹಿಸುತ್ತೇವೆ ಎಂದು ಹೇಳುವ ಮೂಲಕ ಕಿಮ್ ಜಾಂಗ್ ಉನ್ ರೊಂದಿಗೆ ಅಣ್ವಸ್ತ್ರ ಯೋಜನೆ ಕೈ ಬಿಡುವ ಕುರಿತು ಪ್ರಸ್ತಾಪಿಸುವುದಾಗಿ ಪರೋಕ್ಷವಾಗಿ ಹೇಳಿದ್ದಾರೆ.
ಅಭೂತಪೂರ್ವ ಭದ್ರತೆಯ ನಡುವೆ ಕ್ಯಾಪೆಲ್ಲಾ ಹೋಟೆಲ್ ನಲ್ಲಿ ಟ್ರಂಪ್ ಮತ್ತು ಉನ್ ಮುಖಾಮುಖಿ ಭೇಟಿಯಾಗಿದ್ದು, ಸುಮಾರು 45 ನಿಮಿಷಗಳ ಕಾಲ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ. ಈ ವೇಳೆ ಉಭಯ ದೇಶಗಳ ನಡುವೆ ಕಗ್ಗಂಟಾಗಿ ಉಳಿದುಕೊಂಡಿರುವ ಅಣ್ವಸ್ತ್ರ ಯೋಜನೆ ಬಿಕ್ಕಟ್ಟು, ದಕ್ಷಿಣ ಕೊರಿಯಾದೊಂದಿಗಿನ ಗಡಿ ಸಮಸ್ಯೆ ಮುಂತಾದ ವಿಚಾರಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.