ವಿದೇಶ

ಪಾಕಿಸ್ತಾನದ ಇಂಜಿನಿಯರ್ ಗಳಿಗೆ ಲಷ್ಕರ್ ಉಗ್ರ ಸಂಘಟನೆಯಿಂದ ಮ್ಯಾನೇಜ್ಮೆಂಟ್ ತರಬೇತಿ!

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಯ್ಬಾ ಇಂಜಿನಿಯರ್ ಗಳಿಗೆ ಮ್ಯಾನೇಜ್ಮೆಂಟ್ ತರಬೇತಿ ನೀಡುತ್ತಿದೆ.

ಪಾಕಿಸ್ತಾನದ ಇಂಜಿನಿಯರ್ ಗಳಿಗೆ ಲಷ್ಕರ್ ಉಗ್ರ ಸಂಘಟನೆಯಿಂದ ಮ್ಯಾನೇಜ್ಮೆಂಟ್ ತರಬೇತಿ!
ಪಾಕಿಸ್ತಾನದ ಇಂಜಿನಿಯರ್ ಗಳಿಗೆ ಲಷ್ಕರ್ ಉಗ್ರ ಸಂಘಟನೆಯಿಂದ ಮ್ಯಾನೇಜ್ಮೆಂಟ್ ತರಬೇತಿ!
Published On :
ಲಾಹೋರ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಯ್ಬಾ ಇಂಜಿನಿಯರ್ ಗಳಿಗೆ ಮ್ಯಾನೇಜ್ಮೆಂಟ್ ತರಬೇತಿ ನೀಡುತ್ತಿದೆ. 
ಲಾಹೋರ್ ನಲ್ಲಿರುವ ಕೇಂದ್ರ ಕಚೇರಿಯಲ್ಲಿ ಇಂಜಿನಿಯರ್ ಗಳಿಗೆ ಮ್ಯಾನೇಜ್ಮೆಂಟ್ ತರಬೇತಿ ಕೋರ್ಸ್ ಗಳನ್ನು ನೀಡುತ್ತಿದೆ. ಕೋರ್ಸ್ ಮುಕ್ತಾಯಗೊಂಡ ನಂತರ ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ಯೋಜನೆಯಲ್ಲಿ ಕೆಲಸ ಪಡೆಯುವಂತೆ ಇಂಜಿನಿಯರ್ ಗಳಿಗೆ ಸೂಚನೆ ನೀಡಲಾಗಿದೆ ಎಂದು ಭಾರತದ ಗುಪ್ತಚರ ಇಲಾಖೆ ಹೇಳಿದೆ. 
ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಗಳಲ್ಲಿ ಒಬ್ಬನಾಗಿರುವ ಅಬ್ದುಲ್ ರೆಹ್ಮಾನ್ ಮಕ್ಕಿ ಗೆ ಕೋರ್ಸ್ ನ ಜವಾಬ್ದಾರಿ ನೀಡಲಾಗಿದೆ. ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ಯೋಜನೆಯಲ್ಲಿ ಕೆಲಸ ಗಿಟ್ಟಿಸುವ ಉದ್ದೇಶದಿಂದ ಹಾಗೂ ಬರುವ ವೇತನದಲ್ಲಿ ಒಂದಷ್ಟು ಭಾಗವನ್ನು ಭಾರತದ ಮೇಲೆ ದಾಳಿ ನಡೆಸಲು ಸಹಕಾರಿಯಗುವಂತೆ ಉಗ್ರ ಸಂಘಟನೆಗೆ  ನೀಡುವುದು ಕೋರ್ಸ್ ನ ಮೂಲ ಉದ್ದೇಶವಾಗಿದೆ.  ಸುಮಾರು 300 ಜನ ಇಂಜಿನಿಯರ್ ಗಳಿಗೆ ಚೀನಾ-ಪಾಕಿಸ್ತಾನ ಎಕಾನಾಮಿಕ್ ಕಾರಿಡಾರ್ ಯೋಜನೆಯಲ್ಲಿ ಕೆಲಸ ಪಡೆಯುವಂತೆ ಸೂಚಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.