ಇಸ್ರೇಲ್ ಗೆ ಏರ್ ಇಂಡಿಯಾ ವಿಮಾನ: ತನ್ನ ವಾಯುಮಾರ್ಗ ಬಳಕೆಗೆ ಸೌದಿ ಅರೇಬಿಯಾ ಅನುಮತಿ
ಇಸ್ರೆಲ್ ಗೆ ತೆರಾಳುವ ಏರ್ ಇಂಡಿಯಾ ವಿಮಾನ ತನ್ನ ದೇಶದ ವಾಯುಮಾರ್ಗ ಬಳಕೆ ಮಾಡಿಕೊಳ್ಳುವುದಕ್ಕೆ ಸೌದಿ ಅರೇಬಿಯಾ ಅನುಮತಿ ನೀಡಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ.

Published On :
ವಾಷಿಂಗ್ ಟನ್: ಇಸ್ರೆಲ್ ಗೆ ತೆರಾಳುವ ಏರ್ ಇಂಡಿಯಾ ವಿಮಾನ ತನ್ನ ದೇಶದ ವಾಯುಮಾರ್ಗ ಬಳಕೆ ಮಾಡಿಕೊಳ್ಳುವುದಕ್ಕೆ ಸೌದಿ ಅರೇಬಿಯಾ ಅನುಮತಿ ನೀಡಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ.
ಸೌದಿ ಅರೇಬಿಯಾ ಅಥವಾ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಪ್ರಕತವಾಗಬೇಕಿದೆ. ಆದರೆ ಅಮೆರಿಕ ಪ್ರವಾಸದಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಈ ಬಗ್ಗೆ ಈಗಾಗಲೇ ಘೋಷಣೆ ಮಾಡಿದ್ದಾರೆ. ಸೌದಿ ಅರೇಬಿಯಾ ಇಸ್ರೇಲ್ ನ್ನು ಗುರುತಿಸುವುದೇ ಇಲ್ಲ. ಈಗ 70 ವರ್ಷಗಳ ನಂತರ ಏರ್ ಸ್ಪೇಸ್ ನಿಷೇಧವನ್ನು ತೆರವುಗೊಳಿಸಿದ್ದು, ಇಸ್ರೇಲ್ ಹಾಗೂ ಸೌದಿ ಅರೇಬಿಯಾ ನಡುವಿನ ದ್ವಿಪಕ್ಷೀಯ ಸಂಬಂಧದ ಸುಧಾರಣೆಯ ಸಂಕೇತವಾಗಿದೆ ಎಂದು ಹೇಳಿದ್ದಾರೆ.
ಇಸ್ರೇಲ್ ನ ಟೆಲ್‌ಅವೀವ್ ಗೆ ಭಾರತದಿಂದ ವಾರದಲ್ಲಿ ಮೂರು ದಿನ ವಿಮಾನ ಸಂಪರ್ಕ ಕಲ್ಪಿಸುವ ಯೋಜನೆಯನ್ನು ಕಳೆದ ತಿಂಗಳು ಏರ್ ಇಂಡಿಯಾ ಘೋಷಿಸಿತ್ತು ಆದರೆ ಇಸ್ರೇಲ್ ತಲುಪುವುದಕ್ಕೆ ಸೌದಿ ಅರೇಬಿಯಾ ಮೂಲಕ ಹಾದು ಹೋಗಬೇಕಿದ್ದು, ತನ್ನ ವೈಮಾನಿಕ ಮಾರ್ಗವನ್ನು ಬಳಕೆ ಮಾಡುವುದಕ್ಕೆ ಏರ್ ಇಂಡಿಯಾಗೆ ಸೌದಿ ಅರೇಬಿಯಾ ಅನುಮತಿ ನೀಡಿರಲಿಲ್ಲ. ಈಗ ಇಸ್ರೇಲ್ ನಿಂದ ಭಾರತಕ್ಕೆ ಇರುವ ವೈಮಾನಿಕ ಸಂಪರ್ಕ ಸೌದಿ ಅರೆಬಿಯಾ ವಾಯುಮಾರ್ಗ ಬಳಸದೇ ಎಥಿಯೋಪಿಯಾ ಮೂಲಕ ಭಾರತ ಪ್ರವೇಶಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


