ವಿದೇಶ

ಉತ್ತರ ಕೊರಿಯಾ ಸರ್ವಾಧಿಕಾರಿಯೊಂದಿಗೆ ಮಾತುಕತೆ ನಡೆಸಲು ಸಿದ್ಧ: ಅಮೆರಿಕ ಅಧ್ಯಕ್ಷ ಟ್ರಂಪ್

ಅಮೆರಿಕ ಮೇಲೆ ಅಣ್ವಸ್ತ್ರ ದಾಳಿ ಮಾಡುತ್ತೇನೆಂದು ಯುದ್ಧೋತ್ಸಾಹ ಪ್ರದರ್ಶಿಸಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರೊಂದಿಗೆ ಮಾತುಕತೆ ನಡೆಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ...

ಉತ್ತರ ಕೊರಿಯಾ ಸರ್ವಾಧಿಕಾರಿಯೊಂದಿಗೆ ಮಾತುಕತೆ ನಡೆಸಲು ಸಿದ್ಧ: ಅಮೆರಿಕ ಅಧ್ಯಕ್ಷ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್
Published On :
ವಾಷಿಂಗ್ಟನ್: ಅಮೆರಿಕ ಮೇಲೆ ಅಣ್ವಸ್ತ್ರ ದಾಳಿ ಮಾಡುತ್ತೇನೆಂದು ಯುದ್ಧೋತ್ಸಾಹ ಪ್ರದರ್ಶಿಸಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರೊಂದಿಗೆ ಮಾತುಕತೆ ನಡೆಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. 
ಈ ಹಿಂದೆ ಎಂದಿಗೂ ಅಮೆರಿಕಾದ ಯಾವುದೇ ಅಧ್ಯಕ್ಷರು ಉತ್ತರ ಕೊರಿಯಾ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿರಲಿಲ್ಲ. ಆದರೆ, ಇದೀಗ ಟ್ರಂಪ್ ಅವರು ಮಾತುಕತೆ ಮುಂದಾಗಿದ್ದು, ಮಾತುಕತೆ ವೇಳೆ ಪಯೋಂಗ್ಯಾಂಗ್ ಪರಮಾಣು ಶಸ್ತ್ರಾಸ್ತ್ರಗಳ ಯೋಜನೆಗಳನ್ನು ಕೊನೆಗೊಳಿಸುವ ಕುರಿತಂತ ಮಾತುಕತೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಟ್ರಂಪ್ ಹಾಗೂ ಕಿಮ್ ಜಾಂಗ್ ಉನ್ ಮಾತುಕತೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕೊರಿಯಾದ ರಾಷ್ಟ್ರೀಯ ಭದ್ರತಾ ನಿರ್ದೇಶಕ ಚುಂಗ್ ಎಯಿ-ಯಾಂಗ್ ಅವರು, ಶೃಂಗಸಭೆ ನಡೆಸಲು ಶ್ವೇತ ಭವನ ನಿರ್ಧರಿಸಿದ್ದು, ಸೋಮವಾರ ಉತ್ತರ ಕೊರಿಯಾದ ರಾಜಧಾನಿಯಲ್ಲಿ ಕಿಮ್ ಜಾಂಗ್ ಉನ್ ರೊಂದಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸೇರಿದಂತೆ ಇನ್ನಿತರೆ ಉನ್ನತಾಧಿಕಾರಿಗಳು ಮಾತುಕತೆ ನಡೆಸಲಿದ್ದಾರೆಂದು ಹೇಳಿದ್ದಾರೆ. 
ಅಣ್ವಸ್ತ್ರಗಳ ನಾಶಕ್ಕೆ ಕಿಮ್ ಜಾಂಗ್ ಉನ್ ಬದ್ಧರಾಗಿದ್ದು, ಯಾವುದೇ ರೀತಿಯ ಪರಮಾಣು ಅಥವಾ ಕ್ಷಿಪಣಿ ಪರೀಕ್ಷೆಗಳಿಂದ ದೂರವಿರುವುದಾಗಿ ಕಿಮ್ ಜಾಂಗ್ ಉನ್ ವಾಗ್ದಾನ ಮಾಡಿದ್ದಾರೆಂದು ಟ್ರಂಪ್ ಅವರಿಗೆ ತಿಳಿಸಿದ್ದೇನೆ. 
ಉತ್ತರ ಕೊರಿಯಾದ ಅಣ್ವಸ್ತ್ರ ಪರೀಕ್ಷೆಗಳಿಂದಾಗಿ ಉಲ್ಬಣಗೊಂಡ ಉದ್ವಿಗ್ನತೆಗಳ ಬಳಿಕ ಈ ಸಭೆ ನಡೆಯುತ್ತಿದ್ದು, ಬಹಳ ಮಹತ್ವವನ್ನು ಪಡೆದುಕೊಂಡಿದೆ. ಉತ್ತರ ಹಾಗೂ ದಕ್ಷಿಣ ಕೊರಿಯಾಗಳು ಏಪ್ರಿಲ್ ತಿಂಗಳ ಅಂತ್ಯದಲ್ಲಿ ಶೃಂಗಸಭೆ ನಡೆಸಲು ನಿರ್ಧರಿಸಿವೆ.
ಕಿಮ್ ಜಾಂಗ್ ಉನ್ ಅವರು ಟ್ರಂಪ್ ಅವರನ್ನು ಭೇಟಿ ಮಾಡಲು ಕಾತರದಿಂದ ಇದ್ದಾರೆ. ಟ್ರಂಪ್ ಅವರೂ ಕೂಡ ಕಿಮ್ ಜಾಂಗ್ ಉನ್ ಅವರನ್ನು ಭೇಟಿ ಮಾಡಲು ಒಪ್ಪಿಕೊಂಡಿದ್ದಾರೆಂದು ಚುಂಗ್ ಅವರು ಹೇಳಿದ್ದಾರೆ. ಆದರೆ, ಟ್ರಂಪ್ ಅವರು ಉತ್ತರ ಕೊರಿಯಾ ಸರ್ವಾಧಿಕಾರಿಯನ್ನು ಎಲ್ಲಿ ಭೇಟಿ ಮಾಡುತ್ತಾರೆಂಬ ಮಾಹಿತಿಯನ್ನು ಬಹಿರಂಗ ಪಡಿಸಿಲ್ಲ. 
ಕೆಲ ದಿನಗಳ ಹಿಂದಷ್ಟೇ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರು ಅಮೆರಿಕ ಮೇಲೆ ಅಣ್ವಸ್ತ್ರ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅಲ್ಲದೆ. ಉತ್ತರ ಕೊರಿಯಾ ಹಲವಾರು ಅಣ್ವಸ್ತ್ರಗಳ ಪರೀಕ್ಷೆಗಳನ್ನೂ ಮಾಡಿತ್ತು. ಇದು ಇಡೀ ವಿಶ್ವದ ರಾಷ್ಟ್ರಗಳ ಕೆಂಗಣ್ಣಿಗೆ ಕಾರಣವಾಗಿತ್ತು. ಅಣ್ವಸ್ತ್ರದ ಬಟನ್ ನನ್ನ ಮೇಲಿನ ಮೇಲಿದೆ ಎಂದು ಕಿಮ್ ಸವಾಲಿ ಹಾಕಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಟ್ರಂಪ್ ಅವರು, ತಮ್ಮ ಬಳಿಯೂ ಅದಕ್ಕಿಂತ ದೊಡ್ಡ ಅಣ್ವಸ್ತ್ರದ ಬಟನ್ ಇದೆ. ಅದು ಕೆಲಸವನ್ನೂ ಮಾಡುತ್ತದೆ ಎಂದು ಹೇಳಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.