ನೇಪಾಳ: ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ವಿಮಾನ ಪತನ; 49 ಮಂದಿ ಸಾವು
ಬಾಂಗ್ಲಾದೇಶದ ಪ್ರಯಾಣಿಕ ವಿಮಾನವೊಂದು ನೇಪಾಳ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿದೆ

Published On :
ಕಠ್ಮಂಡು(ನೇಪಾಳ): ಬಾಂಗ್ಲಾದೇಶದ ಪ್ರಯಾಣಿಕ ವಿಮಾನವೊಂದು ನೇಪಾಳ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವೇಳೆ ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಕನಿಷ್ಠ 17 ಮಂದಿಯನ್ನು ರಕ್ಷಿಸಲಾಗಿದೆ ಎಂದು ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.
ಘಟನೆಯಲ್ಲಿ ಕನಿಷ್ಟ 49 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ. ಬಾಂಗ್ಲಾ ರಾಜಧಾನಿ ಢಾಕಾ ದಿಂದ ಬರುತ್ತಿದ್ದು ವಿಮಾನ ನಿಲ್ದಾಣದಲ್ಲಿ ಇಳಿಯುವ ಮುನ್ನವೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ವಿಮಾನದ ಬೆಂಕಿಯಿಂದ ಉಂಟಾದ ದಟ್ಟ ಹೊಗೆಯ ಕಾರ್ಮೋಡದಿಂದಾಗಿ ನೇಪಾಳದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುರ್ತಾಗಿ ಮುಚ್ಚಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿಮಾನದಲ್ಲಿ ಒಟ್ಟು 67 ಪ್ರಯಾಣಿಕರು ಹಾಗೂ ನಾಲ್ವರು ಸಿಬ್ಬಂದಿಗಳಿದ್ದರು.
ಇದಾಗಲೇ ನಾವು ಮೃತ ದೇಹಗಳನ್ನು ವಿಮಾನದಿಂಡ ಹೊರತೆಗೆದಿದ್ದೇವೆ. ಗಾಯಗೊಂಡ 20 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ನೇಪಾಳ ಸರ್ಕಾರದ ವಕ್ತಾರ ನಾರಾಯಣ ಪ್ರಸಾದ್ ದುವಾದಿ ಎಪಿಪಿಗೆ ಹೇಳಿದ್ದಾರೆ.
ಘಟನೆಯಲ್ಲಿ ಓಟ್ಟು ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ ನಾಲ್ಕು ಗಂಟೆಯವರೆವಿಗೆ ಒಟ್ಟು 12 ಮೃತದೇಹಗಳನ್ನು ವಶಕ್ಕೆ ಹೊರತೆಗೆಯಲಾಗಿದ ಎಂದು ತಿಳಿದುಬಂದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
plane crashNepalನೇಪಾಳವಿಮಾನ ಅಪಘಾತBangla passenger planeKathmandu airportಬಾಂಗ್ಲಾ ಪ್ರಯಾಣಿಕ ವಿಮಾನಕಠ್ಮಂಡು ವಿಮಾನ ನಿಲ್ದಾಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


