ಪಾಕ್ ಮಾಜಿ ಪ್ರಧಾನಿ ಷರೀಫ್ ನಿವಾಸದ ಬಳಿ ಆತ್ಮಾಹುತಿ ದಾಳಿ: 9 ಜನರ ಸಾವು
ಪಾಕಿಸ್ತಾನದ ಪದತ್ಯುತ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ನಿವಾಸದ ಬಳಿ ಆತ್ಮಾಹುತಿ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆಂದು ಗುರುವಾರ ತಿಳಿದುಬಂದಿದೆ...

Published On :
ಲಾಹೋರ್: ಪಾಕಿಸ್ತಾನದ ಪದತ್ಯುತ ಪ್ರಧಾನಮಂತ್ರಿ ನವಾಜ್ ಷರೀಫ್ ಅವರ ನಿವಾಸದ ಬಳಿ ಆತ್ಮಾಹುತಿ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆಂದು ಗುರುವಾರ ತಿಳಿದುಬಂದಿದೆ.
ಷರೀಫ್ ಅವರ ನಿವಾಸದ ಅನತಿ ದೂರದ ಚೆಕ್ ಪೋಸ್ಟ್ ಬಳಿ ಬಾಲಕನೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡ ಪರಿಣಾಮ 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.
ಈ ಪ್ರಬಲ ಆತ್ಮಾಹುತಿ ಬಾಂಬ್ ಬಾಳಿಯಲ್ಲಿ ಪೊಲೀಸರು ಸೇರಿದಂತೆ ಒಟ್ಟು 9 ಮಂದಿ ಸಾವಿಗೀಡಾಗಿದ್ದು, 14 ಮಂದಿ ಪೊಲೀಸ್ ಸೇರಿ ಇತರೆ 25 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
25 ಮಂದಿ ಪೈಕಿ ನಾಲ್ವರು ಪೊಲೀಸ ಸ್ಥಿತಿ ಗಂಭೀರವಾಗಿದೆ ಎಂದು ರಕ್ಷಣಾ ಕಾರ್ಯಾಚರಣೆ ತಂಡದ ವಕ್ತಾರರು ಮಾಹಿತಿ ನೀಡಿದ್ದಾರೆ. ದಾಳಿಯ ಹೊಣೆಯನ್ನು ಯಾವುದೇ ಉಗ್ರ ಸಂಘಟನೆಗಳು ಈವರೆಗೂ ಹೊತ್ತುಕೊಂಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


