ವಿದೇಶ

ಪರ್ವೇಜ್ ಮುಷರಫ್ ಪಾಸ್ ಪೋರ್ಟ್ ಅಮಾನತಿಗೆ ಪಾಕ್ ಕೋರ್ಟ್ ಆದೇಶ

ದೇಶದ್ರೋಹ ಆರೋಪ ಎದುರಿಸುತ್ತಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌ ಅವರ....

ಪರ್ವೇಜ್ ಮುಷರಫ್ ಪಾಸ್ ಪೋರ್ಟ್ ಅಮಾನತಿಗೆ ಪಾಕ್ ಕೋರ್ಟ್ ಆದೇಶ
ಪರ್ವೇಜ್ ಮುಷರಫ್
Published On :
ಇಸ್ಲಾಮಾಬಾದ್‌: ದೇಶದ್ರೋಹ ಆರೋಪ ಎದುರಿಸುತ್ತಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್‌ ಮುಷರಫ್‌ ಅವರ ಪಾಸ್ ಪೋರ್ಟ್ ಮತ್ತು ರಾಷ್ಟ್ರೀಯ ಗುರುತಿನ ಚೀಟಿಯನ್ನು ಅಮಾನತುಗೊಳಿಸುವಂತೆ ಪಾಕಿಸ್ತಾನದ ವಿಶೇಷ ನ್ಯಾಯಾಲಯ ಶುಕ್ರವಾರ ಸರ್ಕಾರಕ್ಕೆ ಆದೇಶಿಸಿದೆ.
2007ರಲ್ಲಿ  ತುರ್ತು ಪರಿಸ್ಥಿತಿ ಹೇರಿಕೆ ಮಾಡಿರುವ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮುಷರಫ್‌ ಅವರನ್ನು 'ಘೋಷಿತ ಅಪರಾಧಿ' ಎಂದು ಪ್ರಕಟಿಸಿದ್ದು, ದುಬೈನಲ್ಲಿ ತಲೆಮರೆಸಿಕೊಂಡಿರುವ ಪಾಕ್ ಮಾಜಿ ಅಧ್ಯಕ್ಷನನ್ನು ಬಂಧಿಸುವಂತೆ ಕಳೆದ ವಾರ ಆದೇಶ ನೀಡಿತ್ತು. ಇಂದು ಪಾಸ್ ಪೋರ್ಟ್ ಅಮಾನತಿಗೆ ಆದೇಶಿಸಿದ್ದು, ಒಂದು ವೇಳೆ ಕೋರ್ಟ್ ಆದೇಶದಂತೆ ಪಾಕ್ ಸರ್ಕಾರ ಪಾಸ್ ಪೋರ್ಟ್ ಅಮಾನತುಗೊಳಿಸಿದರು, ಮುಷರಫ್ ಇತರೆ ದೇಶಕ್ಕೆ ಪ್ರಯಾಣ ಮಾಡಲು ಸಾಧ್ಯವಿಲ್ಲ. 
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹಲವು ಮಂದಿ ನ್ಯಾಯಾಧೀಶರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. 100ಕ್ಕೂ ಹೆಚ್ಚು ನ್ಯಾಯಾಧೀಶರನ್ನು ವಶಕ್ಕೆ ಪಡೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 2014ರಲ್ಲಿ ಮುಷರಫ್‌ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.
ಹೆಚ್ಚಿನ ದೇಶದ್ರೋಹ ಪ್ರಕರಣಗಳ ಅಪರಾಧಿಗಳಿಗೆ ಇಲ್ಲಿನ ನ್ಯಾಯಾಲಯವು ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ವಿಧಿಸುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.