ವಿದೇಶ

ಮೊಗದಿಶು ನಗರದಲ್ಲಿ ಕಾರ್‌ ಬಾಂಬ್ ಸ್ಫೋಟ, ಕನಿಷ್ಠ 14 ಮಂದಿ ಸಾವು

ಸೊಮಾಲಿಯ ರಾಜಧಾನಿ ಮೊಗದಿಶು ನಗರದ ಹೋಟೆಲ್ ವೊಂದರ ಮುಂದೆ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ...

ಮೊಗದಿಶು ನಗರದಲ್ಲಿ ಕಾರ್‌ ಬಾಂಬ್ ಸ್ಫೋಟ, ಕನಿಷ್ಠ 14 ಮಂದಿ ಸಾವು
ಕಾರ್ ಬಾಂಬ್ ಸ್ಫೋಟ
Published On :
ಮೊಗದಿಶು: ಸೊಮಾಲಿಯ ರಾಜಧಾನಿ ಮೊಗದಿಶು ನಗರದ ಹೋಟೆಲ್ ವೊಂದರ ಮುಂದೆ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ವಕ್ತಾರರು ಹಾಗೂ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಹೋಟೆಲೆವೊಂದರ ಬಳಿ ಸ್ಫೋಟಕ ತುಂಬಿದ ಕಾರನ್ನು ಸ್ಫೋಟಿಸಲಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಅಬ್ದಿಜಿಸ್ ಅಲಿ ಇಬ್ರಾಹಿಂ ಅವರು ಹೇಳಿದ್ದಾರೆ. ಅಲ್ಲದೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದಿದ್ದಾರೆ.
ಇಂದು ಸಂಜೆ ರಾಜಧಾನಿಯ ಜನ ನಿಬಿಡ ರಸ್ತೆಯಲ್ಲಿ ಕಾರ್ ಬಾಂಬ್ ಸ್ಫೋಟಗೊಂಡಿದ್ದು, ಕಚೇರಿಯಿಂದ ಮನಗೆ ತೆರಳುತ್ತಿದ್ದ ಹಲವರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಮೊಗದಿಶು ನಗರದಲ್ಲಿ ಅಲ್ ಖೈದಾ ಉಗ್ರರು ಹಾಗಾಗ ದಾಳಿ ನಡೆಸುತ್ತಿದ್ದು, ಕಳೆದ ತಿಂಗಳು ನಡೆದ ಅವಳಿ ಕಾರು ಬಾಂಬ್ ದಾಳಿಯಲ್ಲಿ 45 ಮಂದಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.