ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತ-ಜಪಾನ್ ಸಂಬಂಧ ಮತ್ತಷ್ಟು ಗಟ್ಟಿಗೊಂಡಿದೆ: ಸುಷ್ಮಾ ಸ್ವರಾಜ್
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದ ಅಡಿಯಲ್ಲಿ ಭಾರತ-ಜಪಾನ್ ಸಂಬಂಧ ಮತ್ತಷ್ಟು ಗಟ್ಟಿಗೊಂಡಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗುರುವಾರ ಹೇಳಿದ್ದಾರೆ...

Published On :
ಟೋಕಿಯಾ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದ ಅಡಿಯಲ್ಲಿ ಭಾರತ-ಜಪಾನ್ ಸಂಬಂಧ ಮತ್ತಷ್ಟು ಗಟ್ಟಿಗೊಂಡಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗುರುವಾರ ಹೇಳಿದ್ದಾರೆ.
ಟೋಕಿಯೋದಲ್ಲಿ ವಿವೇಕಾನಂದ ಸಾಂಸ್ಕೃತಿಕ ಕೇಂದ್ರದಲ್ಲಿ ಅನಿವಾಸಿ ಭಾರತೀಯರೊಂದಿಗೆ ಮಾತನಾಡಿರುವ ಅವರು, ಪ್ರಧಾನಿ ಮೋದಿಯವರು ನಾಯಕತ್ವದ ಅಡಿಯಲ್ಲಿ ಭಾರತ ಮತ್ತು ಜಪಾನ್ ರಾಷ್ಟ್ರಗಳ ಸಂಬಂಧ ಮತ್ತಷ್ಟು ಗಟ್ಟಿಗೊಂಡಿದೆ. ಜಪಾನ್ ರಾಷ್ಟ್ರದಲ್ಲಿ ಭಾರತದ ಬಗ್ಗೆ ಧನಾತ್ಮಕ ಬೆಳವಣಿಗೆಗೆ ಅನಿವಾಸಿ ಭಾರತೀಯರ ಪಾತ್ರ ಪ್ರಮುವಾಗಿದೆ ಎಂದು ಹೇಳಿದ್ದಾರೆ.
ಈ ಹಿಂದಿಗಿಂತಲೂ ಭಾರತ-ಜಪಾನ್ ರಾಷ್ಟ್ರಗಳ ಸಂಬಂಧ ಮತ್ತಷ್ಟು ಬಲಗೊಂಡಿದೆ. ಇದಕ್ಕೆ ಪ್ರಮುಖ ಕಾರ್ಯ ಪ್ರಧಾನಮಂತ್ರಿ ನರೇಂದ್ರ ಮೋಜಿ ಹಾಗೂ ಶಿಂಜೋ ಅಬೆಯವರ ಸ್ನೇಹ ಎಂದು ತಿಳಿಸಿದ್ದಾರೆ.
ಟೋಕಿಯೋಗೆ ಸುಷ್ಮಾ ಸ್ವಾರದ್ ಅವರು ಬುಧವಾರ ಭೇಟಿ ನೀಡಿದ್ದು, ಅಲ್ಲಿಯೇ 3 ದಿನಕಾಲ ಕಾಲ ಕಳೆಯಲಿದ್ದಾರೆ. ಜಪಾನಿನ ವಿದೇಶಾಂಗ ಸಚಿವ ತರೋ ಕೊನೋ ಅವರೊಂದಿಗೆ ಸುಷ್ಮಾ ಸ್ವರಾಜ್ ಅವರು ತಂತ್ರಗಾರಿಕಾ ಮಾತುಕತೆ ನಡೆಸಲಿದ್ದಾರೆ. ಉಭಯ ದೇಶಗಳು ದ್ವಿಪಕ್ಷೀಯ ಮಾತುಕತೆಯಲ್ಲಿ ತೊಡಗಿದ್ದು, ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ಹಿತಾಸಕ್ತಿಗಳ ಕುರಿತು ಪರಸ್ಪರ ಚರ್ಚೆ ನಡೆಸಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


