ವಿದೇಶ

ಟೆಕ್ಸಾಸ್ ಶಾಲೆಯಲ್ಲಿ ಗುಂಡಿನ ದಾಳಿ, 10 ಮಂದಿ ಸಾವು, ಆರೋಪಿ ಬಂಧನ

ಅಮೆರಿಕದ ಟೆಕ್ಸಾಸ್ ರಾಜ್ಯದ ಹೈಸ್ಕೂಲ್ ಒಂದರಲ್ಲಿ ನಡೆದ ಗುಂಡಿನ ದಾಳಿಗೆ ಕನಿಷ್ಠ 10 ಜನ ಬಲಿಯಾಗಿದ್ದಾರೆ.

ಟೆಕ್ಸಾಸ್ ಶಾಲೆಯಲ್ಲಿ ಗುಂಡಿನ ದಾಳಿ, 10 ಮಂದಿ ಸಾವು, ಆರೋಪಿ ಬಂಧನ
ಶೂಟಿಂಗ್ ನಡೆದ ಸ್ಥಳದ ವೀಡಿಯೋ ದೃಶ್ಯ
Published On :
ಶಿಕಾಗೋ(ಅಮೆರಿಕಾ): ಅಮೆರಿಕದ ಟೆಕ್ಸಾಸ್ ರಾಜ್ಯದ ಹೈಸ್ಕೂಲ್ ಒಂದರಲ್ಲಿ ನಡೆದ ಗುಂಡಿನ ದಾಳಿಗೆ ಕನಿಷ್ಠ 10 ಜನ ಬಲಿಯಾಗಿದ್ದಾರೆ.
ಟೆಕ್ಸಾಸ್ ರಾಜ್ಯದ ಅದೇ ಹೆಸರಿನ ನಗರದ ಸಂತಾ ಫೆ ಹೈಸ್ಕೂಲ್ ನಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಗುರುತು ಪತ್ತೆಯಾಗದ ಕಾನೂನು ಜಾರಿ ಅಧಿಕಾರಿಯೊಬ್ಬರಿಗೆ ಗುಂಡು ತಗುಲಿದೆ. ಆದರೆ ಮೂಲದ ಪ್ರಕಾರ ಅಧಿಕಾರಿಯು ಅಪಾಯದಿಂದ ಪಾರಾಗಿದ್ದಾರೆ.
ಘಟನೆಯಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ,ಎಂದು ಫೆಡರಲ್ ಮತ್ತು ಕೌಂಟಿ ಕಾನೂನು ಜಾರಿ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿಹೂಸ್ಟನ್ ಕ್ರಾನಿಕಲ್ ವರದಿ ಮಾಡಿದೆ.
ಗುಂಡು ಹಾರಿಸಿದ ದುಷ್ಕರ್ಮಿ ಓರ್ವ ಪುರುಷನಾಗಿದ್ದನೆಂದು ಒಂದು ಮೂಲದ ಮಾಹಿತಿ ಸಿಕ್ಕಿದೆಯಾದರೂ ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.
ಅಪರಾಧಿಯನ್ನು ಬಂಧಿಸಿ ಗುಂಡಿನ ದಾಳಿ ನಡೆಸಿದ್ದ ಪಿಸ್ತೂಲ್ ನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೈಸ್ಕೂಲ್ ಸಹಾಯಕ ಪ್ರಾಂಶುಪಾಲರು ಹೇಳಿದ್ದಾರೆ.
ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದಾರೆ ಎಂದು ತಿಳಿದುಬಂದಿದೆ. ಕಳೆದ 7 ದಿನಗಳಲ್ಲಿ ಅಮೆರಿಕಾದಲ್ಲಿ ನಡೆಯುತ್ತಿರುವ 3ನೇ ಗುಂಡಿನ ದಾಳಿ ಪ್ರಕರಣ ಇದಾಗಿದ್ದು ಈ ವರ್ಷದ  22 ನೇ ಘಟನೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.