113 ಪ್ರಯಾಣಿಕರಿದ್ದ ಬೋಯಿಂಗ್ ವಿಮಾನ ಪತನ: ಕ್ಯೂಬಾ ಮಾದ್ಯಮ ವರದಿ
ಹವಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಬೋಯಿಂಗ್ 737 ಕ್ಯೂಬಾ ಏರ್ಲೈನ್ ಗೆ ಸೇರಿದ ವಿಮಾನವು ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.

Published On :
ಹವಾನಾ(ಕ್ಯೂಬಾ): ಹವಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಬೋಯಿಂಗ್ 737 ಕ್ಯೂಬಾ ಏರ್ಲೈನ್ ಗೆ ಸೇರಿದ ವಿಮಾನವು ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ.
ಅಪಘಾತಕ್ಕೀಡಾದ ವಿಮಾನದಲ್ಲಿ 113 ಪ್ರಯಾಣಿಕರಿದ್ದರೆನ್ನಲಾಗಿದೆ ಆದರೆ ಸಾವುನೋವುಗಳ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ಕ್ಯೂಬಾ ಮಾದ್ಯಮ ಪ್ರಕಟಣೆ ತಿಳಿಸಿದೆ.
ಇದೇ ವೇಳೆ ಅಪಘಾತ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳ ಸೇರಿ ತುರ್ತು ಕಾರ್ಯಪಡೆಯನ್ನು ಕಳಿಸಲಾಗಿದೆ.
ತನ್ನ ಹೆಸರನ್ನು ಹೇಳಲಿಚ್ಚಿಸದ ಮಿಲಿಟರಿ ಅಧಿಕಾರಿಯೊಬ್ಬರು ಕ್ಯೂಬಾನಾ ವಿಮಾನ ಅಪಘಾತದಲ್ಲಿ ಮೂವರು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದಿದ್ದಾರೆ.
ಆದರೆ ಅಪಘಾತದಿಂದ ಅಪಾಯಕ್ಕೊಳಗಾದ ಪ್ರಯಾಣಿಕರ ನಿಖರ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ ಎಂಬುದಾಗಿ ಮಾದ್ಯಮ ವರದಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


