ಶ್ರೀಲಂಕಾ ರಾಜಕೀಯ ಬಿಕ್ಕಟ್ಟು; ಸಂಸತ್ ವಿಸರ್ಜಿಸಿದ ಅಧ್ಯಕ್ಷ ಸಿರಿಸೇನಾ
ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಸಂಸತ್ ಅನ್ನು ವಿಸರ್ಜಿಸಿದ್ದಾರೆ...

Published On :
ಕೊಲೊಂಬೊ: ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಸಂಸತ್ ಅನ್ನು ವಿಸರ್ಜಿಸಿದ್ದಾರೆ.
ಕಳೆದ ಎರಡು ವಾರಗಳಿಂದ ಪ್ರಧಾನಿಗಳ ನಡುವಿನ ಬಿಕ್ಕಟ್ಟು ಮುಗಿಯುವ ಲಕ್ಷಣಗಳು ತೋರದ ಹಿನ್ನಲೆಯಲ್ಲಿ ಅಧ್ಯಕ್ಷರು ಸಂಸತ್ ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.
ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ಅಮಾನತು ಮಾಡಿ ಮಹಿಂದ ರಾಜಪಕ್ಸೆ ಅವರನ್ನು ನೇಮಿಸಲಾಗಿತ್ತು. ಅಲ್ಲಿಂದ ಸಾಂವಿಧಾನಿಕ ಬಿಕ್ಕಟ್ಟು ಆರಂಭವಾಗಿತ್ತು. ಇನ್ನು ರಾಜಪಕ್ಸೆ ಅವರ ಅಧಿಕಾರ ಅರಳುವ ಮುನ್ನವೇ ಮೊಟಕುಗೊಂಡಿದೆ. ಸಿಕ್ಕ ಅವಕಾಶವನ್ನು ಬಳಸಿಕೊಳ್ಳದ ರಾಜಪಕ್ಸೆ ಅವರು ಅಗತ್ಯ ಬಹುಮತ ಗಳಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಲೋಕಸಭೆಯನ್ನು ವಿಸರ್ಜಿಸುವುದು ಲಂಕಾ ಅಧ್ಯಕ್ಷರಿಗೆ ಅನಿವಾರ್ಯವಾಗಿತ್ತು. ಇದರೊಂದಿಗೆ ಲಂಕಾದ 225 ಸದಸ್ಯ ಬಲದ ಲೋಕಸಭೆ ಇವತ್ತು ಮಧ್ಯರಾತ್ರಿಗೆ ಅಂತ್ಯವಾಗಲಿದೆ.
ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ಸಂಸತ್ ವಿಸರ್ಜನೆ ಮಾಡಿರುವ ಸಿರಿಸೇನಾ ನವೆಂಬರ್ 14ರ ನಂತರ ಸಂಸತ್ ಅಧಿವೇಶನ ಆಯೋಜಿಸಲು ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


