ಅಮೆರಿಕಾ ಚುನಾವಣೆಯಲ್ಲಿ ಅರಳುತ್ತಾ ಕಮಲ?
ಅಮೆರಿಕಾದಲ್ಲಿ 2020 ಕ್ಕೆ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಸಂಭಾವ್ಯ ಅಭ್ಯರ್ಥಿಗಳ ಕುರಿತು ಈಗಾಗಲೇ ಚರ್ಚೆ ಪ್ರಾರಂಭವಾಗಿದೆ....

Published On :
ಅಮೆರಿಕಾದಲ್ಲಿ 2020 ಕ್ಕೆ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಸಂಭಾವ್ಯ ಅಭ್ಯರ್ಥಿಗಳ ಕುರಿತು ಈಗಾಗಲೇ ಚರ್ಚೆ ಪ್ರಾರಂಭವಾಗಿದೆ. ಈ ಬಾರಿಯ ಅಧ್ಯಕ್ಷೀಯ ಹುದ್ದೆಯ ರೇಸ್ ನಲ್ಲಿ ಮಹಿಳೆಯರ ಹೆಸರು ಹೆಚ್ಚಿನ ಸಂಖ್ಯೆಯಲ್ಲಿರುವುದರ ಜೊತೆಗೆ ಹಿಂದೂ-ಭಾರತೀಯ ಮೂಲದ ಹೆಸರುಗಳು ಕೇಳಿಬರುತ್ತಿರುವುದು ವಿಶೇಷ.
ಫೀಮೇಲ್ ಒಬಾಮ ಎಂದೇ ಖ್ಯಾತರಾಗಿರುವ ಅಮೆರಿಕ ಭಾರತೀಯ ಮೂಲದ ಅಮೆರಿಕ ಸೆನೆಟರ್ ಕಮಲಾ ಹ್ಯಾರಿಸ್ ಅವರ ಹೆಸರೂ ಸಹ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೇಳಿಬಂದಿದ್ದು, ಡೆಮಾಕ್ರೆಟಿಕ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಕಮಲಾ ಹ್ಯಾರಿಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಕ್ಕೆ ತಯಾರಿ ನಡೆಸಿಕೊಳ್ಳುತ್ತಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಕ್ಯಾಲಿಫೋರ್ನಿಯಾದಲ್ಲಿ ಜನಿಸಿದ ಕಮಲಾ ಹ್ಯಾರಿಸ್ ಅವರ ತಾಯಿ ಶ್ಯಾಮಲಾ ಗೋಪಾಲನ್ ಭಾರತೀಯ ಮೂಲದವರು, 1960 ರಲ್ಲಿ ಚೆನ್ನೈ ನಿಂದ ಅಮೆರಿಕಾಗೆ ತೆರಳಿ ಅಮೆರಿಕ ವ್ಯಕ್ತಿಯನ್ನೇ ವಿವಾಹವಾಗಿದ್ದರು. ಕಮಲಾ ಹ್ಯಾರಿಸ್ ಅವರ ತಂದೆ ಡೊನಾಲ್ಡ್ ಹ್ಯಾರಿಸ್ ಅಮೆರಿಕದಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದ ವಿದ್ವಾಂಸರಾಗಿದ್ದರು.
ಒಬಾಮಾ ಮಾದರಿಯಲ್ಲೇ ಕಮಲಾ ಹ್ಯಾರಿಸ್ ಸಹ ಜನಪ್ರಿಯತೆ ಹೊಂದಿದ್ದು ಫೀಮೇಲ್ ಒಬಾಮ ಎಂದೇ ಖ್ಯಾತರಾಗಿರುವ ಅಮೆರಿಕ ಭಾರತೀಯ ಮೂಲದ ಅಮೆರಿಕ ಸೆನೆಟರ್ 2020 ರ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ ಎನ್ನುತ್ತಿವೆ ಅಮೆರಿಕ ಪತ್ರಿಕೆಗಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
aspirantsಆಕಾಂಕ್ಷಿಗಳುKamala Harrisಕಮಲಾ ಹ್ಯಾರಿಸ್US presidential elections 2020Female Obamaಅಮೆರಿಕ ಅಧ್ಯಕ್ಷೀಯ ಚುನಾವಣೆ 2020ಫೀಮೇಲ್ ಒಬಾಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


