ಅಮೆರಿಕಾದೊಂದಿಗೆ ಉಗ್ರರ ವಿರೋಧಿ ಹೋರಾಟಕ್ಕೆ ಕೈ ಜೋಡಿಸಿದ್ದಕ್ಕೆ ನಮಗೇ ನಷ್ಟವಾಗಿದೆ: ಇಮ್ರಾನ್ ಖಾನ್
ಪಾಕಿಸ್ತಾನ ಭಯೋತ್ಪಾದನೆಯ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಿಲ್ಲ, ಭಯೋತ್ಪಾದನೆ ವಿಷಯದಲ್ಲಿ ಅಮೆರಿಕಗೆ ಯಾವುದೇ ಸಹಕಾರವನ್ನೂ ನೀಡಿಲ್ಲ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಕ್ಕೆ ಪಾಕ್

Published On :
ಇಸ್ಲಾಮಾಬಾದ್: ಪಾಕಿಸ್ತಾನ ಭಯೋತ್ಪಾದನೆಯ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಿಲ್ಲ, ಭಯೋತ್ಪಾದನೆ ವಿಷಯದಲ್ಲಿ ಅಮೆರಿಕಗೆ ಯಾವುದೇ ಸಹಕಾರವನ್ನೂ ನೀಡಿಲ್ಲ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಕ್ಕೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಅಮೆರಿಕ ಅಫ್ಘಾನಿಸ್ತಾನದಲ್ಲಿ ತನ್ನ ವೈಫಲ್ಯಕ್ಕೆ ಪಾಕಿಸ್ತಾನವನ್ನು ಬಲಿಪಶು ಮಾಡುವ ಬದಲು, ತಾಲಿಬಾನ್ ಹಿಂದೆಂದಿಗಿಂತಲೂ ಏಕೆ ಬಲಿಷ್ಠವಾಗಿದೆ ಎಂಬುದನ್ನು ಅಮೆರಿಕ ಅರಿಯಬೇಕಾಗಿದೆ ಎಂದು ಹೇಳಿದ್ದಾರೆ. ಪಾಕಿಸ್ತಾನಕ್ಕೆ ಅಮೆರಿಕದಿಂದ ಸಿಗುತ್ತಿದ್ದ ಆರ್ಥಿಕ ನೆರವಿಗೆ ಕಡಿವಾಣ ಹಾಕಿರುವ ಕ್ರಮವನ್ನು ಸಮರ್ಥನೆ ಮಾಡಿಕೊಂಡು ಟ್ರಂಪ್ ಟ್ವೀಟ್ ಮಾಡಿದ ಬೆನ್ನಲ್ಲೆ ಇಮ್ರಾನ್ ಖಾನ್ ಸಹ ಟ್ವೀಟ್ ಮಾಡಿದ್ದು, ಪಾಕ್ ವಿರುದ್ಧ ಟ್ರಂಪ್ ಆರೋಪಗಳಿಗೆ ನೇರವಾಗಿ ದಾಖಲೆಗಳನ್ನು ನೀಡಬೇಕಿದೆ. 9/11 ದಾಳಿಯಲ್ಲಿ ಯಾವುದೇ ಪಾಕಿಸ್ತಾನಿಯೂ ಇಲ್ಲದೇ ಇದ್ದರೂ ಸಹ ಅಮೆರಿಕ ಭಯೋತ್ಪಾದನೆ ವಿರುದ್ಧ ನಡೆಸಿದ್ದ ಹೋರಾಟದಲ್ಲಿ ಪಾಕ್ ಸಹ ಕೈ ಜೋಡಿಸಲು ನಿರ್ಧರಿಸಿತ್ತು. ಈ ಹಂತದಲ್ಲಿ ಪಾಕಿಸ್ತಾನ ಸಹ 75,000 ಸಾವು-ನೋವುಗಳನ್ನು ಕಂಡಿದ್ದು, 123 ಬಿಲಿಯನ್ ಡಾಲರ್ ನಷ್ಟು ಹಣವನ್ನೂ ಕಳೆದುಕೊಂಡಿದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.
ಅಮೆರಿಕಾ ಉಗ್ರ ವಿರೋಧಿ ಯುದ್ಧದಿಂದಾಗಿ ಪಾಕಿಸ್ತಾನಕ್ಕೆ ಆರ್ಥಿಕವಾಗಿ ನಷ್ಟವಾಗುವುದಷ್ಟೇ ಅಲ್ಲದೇ ಪಾಕಿಸ್ತಾನದ ಬುಡಕಟ್ಟು ಪ್ರದೇಶಗಳಿಗೂ ಹಾನಿಯುಂಟಾಗಿದೆ. ಇದರಿಂದಾಗಿ ಸಾಮಾನ್ಯ ಪಾಕಿಸ್ತಾನಿಯರ ಜೀವನಕ್ಕೂ ಸಾಕಷ್ಟು ಹಾನಿಯಾಗಿದೆ ಎಂದು ಇಮ್ರಾನ್ ಖಾನ್ ಅಮೆರಿಕ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿದ್ದು, ಇಷ್ಟೆಲ್ಲಾ ತ್ಯಾಗ ಮಾಡಿರುವ ಮತ್ತೊಂದು ಮಿತ್ರ ರಾಷ್ಟ್ರದ ಹೆಸರನ್ನು ಉಲ್ಲೇಖಿಸಲು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಸಾಧ್ಯವೇ ಎಂದು ಇಮ್ರಾನ್ ಖಾನ್ ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


