ವಿದೇಶ

ಚೀನಾ: ಕೆಮಿಕಲ್ ಘಟಕದಲ್ಲಿ ಭೀಕರ ಸ್ಫೋಟ, ಕನಿಷ್ಠ 22 ಮಂದಿ ದಾರುಣ ಸಾವು

ಚೀನಾದ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ನಡೆದ ಭೀಕರ ಸ್ಫೋಟದಲ್ಲಿ ಕನಿಷ್ಠ 22 ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ.

ಚೀನಾ: ಕೆಮಿಕಲ್ ಘಟಕದಲ್ಲಿ ಭೀಕರ ಸ್ಫೋಟ, ಕನಿಷ್ಠ 22 ಮಂದಿ ದಾರುಣ ಸಾವು
ಚೀನಾ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
Published On :
ಬೀಜಿಂಗ್: ಚೀನಾದ ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ನಡೆದ ಭೀಕರ ಸ್ಫೋಟದಲ್ಲಿ ಕನಿಷ್ಠ 22 ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ.
ಉತ್ತರ ಚೀನಾದ ಝಾಂಗ್ಜಿಕೌ ನಗರದಲ್ಲಿರುವ ಹೆಬಿ ಷೆನ್ಘುವಾ ಕೆಮಿಕಲ್ ಕಂಪನಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಛ 22 ಮಂದಿ ಸಾವಿಗೀಡಾಗಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಯಲ್ಲಿ ಕಾರ್ಖಾನೆಯಲ್ಲಿದ್ದು ಸುಮಾರು 50ಕ್ಕೂ ಹೆಚ್ಚು ಸಣ್ಣ ಮತ್ತು ದೊಡ್ಡ ಟ್ರಕ್ ಗಳು ಬೆಂಕಿಗಾಹುತಿಯಾಗಿದ್ದು, ಕಾರ್ಖಾನೆಯಲ್ಲಿ ಅಪಾರ ಪ್ರಮಾಣದ ರಾಸಾಯನಿಕಗಳು ಬೆಂಕಿಗಾಹುತಿಯಾಗಿದೆ. ಇನ್ನು ದುರ್ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಉಂಟಾದ ಅಗ್ನಿ ಅವಘಡವೇ ಸ್ಫೋಟಕ್ಕೆ ಕಾರಣ ಎನ್ನಲಾಗಿದೆ. 
ಸ್ಫೋಟದ ರಭಸಕ್ಕೆ ಕಾರ್ಖಾನೆಯ ಕೆಲ ಗೋಡೆಗಳೂ ಕೂಡ ಬಿರುಕುಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.