ವಿದೇಶ

'ದೊಡ್ಡ ಕಚೇರಿಗಳಲ್ಲಿ ಸಣ್ಣ ಮನುಷ್ಯರು' ಪ್ರಧಾನಿ ಮೋದಿ ಕುರಿತು ಹೇಳಿದ್ದಲ್ಲ: ಇಮ್ರಾನ್ ಖಾನ್ ಸ್ಪಷ್ಟನೆ

ದೊಡ್ಡ ಕಚೇರಿಗಳಲ್ಲಿ ಸಣ್ಣ ಮನುಷ್ಯರು' ತಮ್ಮ ಹೇಳಿಕೆಯನ್ನು ಮಾಧ್ಯಮಗಳಲ್ಲಿ ತಪ್ಪಾಗಿ ಅರ್ಥೈಸಲಾಗುತ್ತಿದ್ದು, ತಾವು ಆ ಹೇಳಿಕೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಹೇಳಿದ್ದಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸ್ಪಷ್ಟನೆ ನೀಡಿದ್ದಾರೆ.

'ದೊಡ್ಡ ಕಚೇರಿಗಳಲ್ಲಿ ಸಣ್ಣ ಮನುಷ್ಯರು' ಪ್ರಧಾನಿ ಮೋದಿ ಕುರಿತು ಹೇಳಿದ್ದಲ್ಲ: ಇಮ್ರಾನ್ ಖಾನ್ ಸ್ಪಷ್ಟನೆ
ಸಂಗ್ರಹ ಚಿತ್ರ
Published On :
ಇಸ್ಲಾಮಾಬಾದ್: 'ದೊಡ್ಡ ಕಚೇರಿಗಳಲ್ಲಿ ಸಣ್ಣ ಮನುಷ್ಯರು' ತಮ್ಮ ಹೇಳಿಕೆಯನ್ನು ಮಾಧ್ಯಮಗಳಲ್ಲಿ ತಪ್ಪಾಗಿ ಅರ್ಥೈಸಲಾಗುತ್ತಿದ್ದು, ತಾವು ಆ ಹೇಳಿಕೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಹೇಳಿದ್ದಲ್ಲ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸ್ಪಷ್ಟನೆ ನೀಡಿದ್ದಾರೆ.
ವಿಶ್ವಸಂಸ್ಥೆ ಸಾಮಾನ್ಯ ಸಭೆಯ ನಡುವೆ ನಡೆಯಬೇಕಿದ್ದ ಭಾರತ ಮತ್ತು ಪಾಕಿಸ್ತಾನ ವಿದೇಶಾಂಗ ಸಚಿವರ ಭೇಟಿಯನ್ನು ಭಾರತ ರದ್ದುಗೊಳಿಸಿದ ಬೆನ್ನಲ್ಲೇ ಇಮ್ರಾನ್ ಖಾನ್ ತಮ್ಮ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿದ್ದರು. ಈ ವೇಳೆ  ನನ್ನ ಇಡೀ ಜೀವನವೇ ಹೋರಾಟವಾಗಿದ್ದು ದೊಡ್ಡ ದೊಡ್ಡ ಕಚೇರಿಗಳಲ್ಲಿರುವ ಸಣ್ಣ ಮನುಷ್ಯರೊಂದಿಗೆ ಕಳೆಯುವಂತಾಗಿದೆ. ಇವರಿಗೆ ದೂರದೃಷ್ಟಿ ಮತ್ತು ಭವಿಷ್ಯದ ಆಲೋಚನೆಗಳೇ ಇಲ್ಲ ಎಂದು ಕಿಡಿಕಾರಿದ್ದರು. 
ಫ್ರಾನ್ಸ್ ಮತ್ತು ಜರ್ಮನಿ ದೇಶಗಳು ಅತೀ ಹೆಚ್ಚು ಪ್ರಮಾಣದಲ್ಲಿ ಯುದ್ದಗಳನ್ನು ನಡೆಸಿವೆ. ಇದು ಬೇರೆ ರಾಷ್ಟ್ರಗಳಿಂದ ಸಾಧ್ಯವಿಲ್ಲ ಎಂದಲ್ಲ. ಯುದ್ಧಕ್ಕಿಂತ ಶಾಂತಿ ಮುಖ್ಯ. ಯುದ್ಧವೇ ಎಲ್ಲದಕ್ಕೂ ಪರಿಹಾರವಲ್ಲ. ಒಬ್ಬರ ಮೇಲೆ ಒಬ್ಬರು ಕೆಸರೆರಚಿಕೊಳ್ಳುವ ಬದಲು ಶಾಂತಿಸ್ಥಾಪನೆಗೆ ಮಾಡಬಹುದಾದ ಕಾರ್ಯಗಳತ್ತ ದೃಷ್ಟಿ ಹಾರಿಸೋಣ ಎಂದು ಖಾನ್ ಹೇಳಿದ್ದಾರೆ.
ಇಮ್ರಾನ್ ಖಾನ್ ಅವರ ಈ ಹೇಳಿಕೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಲಾಗಿದೆ ಎಂದು ಕೆಲ ಮಾಧ್ಯಮಗಳು ವರದಿ ಬಿತ್ತರಿಸಿದ್ದವು. ಇದು ವಿವಾದಕ್ಕೂ ಕಾರಣವಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಇಮ್ರಾನ್ ಖಾನ್ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗುತ್ತಿದ್ದು, ತಾವು ಆ ಹೇಳಿಕೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೇಳಿದ್ದಲ್ಲ. ಉಭಯ ರಾಷ್ಚ್ರಗಳ ನಡುವಿನ ಶಾಂತಿ ಸ್ಥಾಪನೆಗೆ ತಮ್ಮಮೊದಲ ಆಧ್ಯತೆ. ಇದನ್ನು ತಪ್ಪಾಗಿ ಅರ್ಥೈಸುವ ಕೆಲಸ ಮಾಡಬೇಡಿ ಎಂದು ಖಾನ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.