ಲೇಸರ್ ಭೌತಶಾಸ್ತ್ರದಲ್ಲಿ ಸಾಧನೆ ಮಾಡಿದ 3 ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ ಗರಿ
2018ನೇ ಸಾಲಿನ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿ ಪ್ರಕಟವಾಗಿದೆ. ಆರ್ಥರ್ ಆ್ಯಶ್‌ಕಿನ್, ಜೆರಾರ್ಡ್ ಮೌರೋ ಮತ್ತು ಡೊನ್ನಾ ಸ್ಟಿಕ್ ಲ್ಯಾಂಡ್ ಅವರುಗಳು ಈ ಸಾಲಿನ ಪ್ರತಿಷ್ಠಿತ ಪ್ರಶಸ್ತಿ ಸಂದಿದೆ.

Published On :
ಸ್ಟಾಕ್ ಹೋಮ್: 2018ನೇ ಸಾಲಿನ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿ ಪ್ರಕಟವಾಗಿದೆ. ಆರ್ಥರ್ ಆ್ಯಶ್‌ಕಿನ್, ಜೆರಾರ್ಡ್ ಮೌರೋ ಮತ್ತು ಡೊನ್ನಾ ಸ್ಟಿಕ್ ಲ್ಯಾಂಡ್ ಅವರುಗಳು ಈ ಸಾಲಿನ ಪ್ರತಿಷ್ಠಿತ ಪ್ರಶಸ್ತಿ ಸಂದಿದೆ.
ಲೇಸರ್ ಭೌತಶಾಸ್ತ್ರೀಯ ಸಂಶೋಧನಾ ಕ್ಷೇತ್ರದಲ್ಲಿ ಈ ಮೂವರು ಸಾಧಿಸಿರುವ ಅಸಾಧಾರಣ ಪ್ರಗತಿಯನ್ನು ಗಮನದಲ್ಲಿರಿಸಿಕೊಂಡು ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸಯನ್ಸಸ್ ಹೇಳಿದೆ.
ಡೊನ್ನಾ ಸ್ಟಿಕ್ ಲ್ಯಾಂಡ್ ನೊಬೆಲ್ ಪ್ರಶಸ್ತಿ ಇತಿಹಾಸದಲ್ಲಿ ಭೌತಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ಪಡೆದ ಮೂರನೇ ಮಹಿಳೆಯಾಗಿದ್ದಾರೆ.
ಅತಿ ಸಣ್ಣ ಹಾಗೂ ಸೂಕ್ಷ್ಮಾಣು ಲೇಸರ್ ತಂತ್ರಜ್ಞಾನಅಭಿವೃದ್ದಿಪಡಿಸಿದ ಕಾರಣಕ್ಕೆ ನೊಬೆಲ್ ಪ್ರಶಸ್ತಿ ಸಂದಿದೆ.ಈ ಲೇಸರ್ ತಂತ್ರಜ್ಞಾನಕಣ್ಣು ಹಾಗೂ ದೇಹದ ಇತರೆ ಸೂಕ್ಷ್ಮ ಅಂಗಗಳ ಚಿಕಿತ್ಸೆಗೆ ಹೆಚ್ಚು ನೆರವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


